ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಉಡುಪಿಯ ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಮತ ಎಣಿಕೆ ಕೇಂದ್ರದಲ್ಲಿ ಆರಂಭಗೊಂಡಿದೆ.
ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೂರ್ಮಾರಾವ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಮನ್ನು ತೆರೆಯಲಾಗಿದ್ದು ಮತ ಎಣಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ.
ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ. ಈಗಾಗಲೇ ಮತ ಎಣಿಕಾ ಕೇಂದ್ರಕ್ಕೆ ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಆಗಮಿಸಿದ್ದಾರೆ.