Advertisement

ಅತಂತ್ರ ಸ್ಥಿತಿ; ಕೈ-ಜೆಡಿಎಸ್ ಮೈತ್ರಿ, HDKಗೆ ಸಿಎಂ ಹುದ್ದೆ ಆಫರ್?

02:32 PM May 15, 2018 | Team Udayavani |

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣದ ಚಿತ್ರಣ ಹೊರಬೀಳತೊಡಗಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಹೈಡ್ರಾಮಾ ನಡೆಯುತ್ತಿದೆ.

Advertisement

ಏತನ್ಮಧ್ಯೆ 222 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 104 ಸ್ಥಾನ ಹಾಗೂ ಕಾಂಗ್ರೆಸ್ 78 ಸ್ಥಾನ, ಜೆಡಿಎಸ್ 38 ಸ್ಥಾನ ಪಡೆದಿದ್ದು, ಒಬ್ಬರು ಕೆಪಿಜೆಪಿ, ಪಕ್ಷೇತರ ಒಬ್ಬರು ಗೆಲುವು ಸಾಧಿಸಿದ್ದಾರೆ.

ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 112 ಬೇಕು. ಆದರೆ ಸದ್ಯದ ಸ್ಥಿತಿಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಕ್ಕಿಲ್ಲ.

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸೂತ್ರ: ಎಚ್ ಡಿಕೆಗೆ ಸಿಎಂ ಆಫರ್?

ಸರ್ಕಾರ ರಚನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಸರತ್ತು ನಡೆಸುತ್ತಿದ್ದು, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಜತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.

Advertisement

ಅಲ್ಲದೇ ಎಚ್ ಡಿ ಕುಮಾರಸ್ವಾಮಿಗೆ ಮುಖ್ಯಮಂತ್ರಿ ಹುದ್ದೆ ನೀಡಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದ್ದು, ಶತಾಯಗತಾಯ ಅಧಿಕಾರದ ಗದ್ದುಗೆ ಏರಲು ರಣತಂತ್ರ ರೂಪಿಸುತ್ತಿದೆ ಎಂದು ಮೂಲಗಳು ವಿವರಿಸಿವೆ. ಇನ್ನು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನಿಯೋಗ ಜೆಡಿಎಸ್ ಮುಖಂಡರನ್ನು ಭೇಟಿಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next