ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ಕೆ.ಗೋಪಾಲಯ್ಯ ಅವರು ಇಂದು 68ನೇ ವಾರ್ಡ್‌ನ ಶ್ರೀರಾಮನಗರದ ಗೆಳೆಯರ ಬಳಗ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಅಭಿವೃದ್ಧಿಗೆ ಮತ ನೀಡಿ ಎಂದು ಮತಯಾಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರದಲ್ಲಿ ರೋಡ್ ಶೋ ಮಾಡಿದ್ದಾರೆ. ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ಅವರನ್ನು ಹತ್ತಿರದಿಂದ ಬಂದು ನೋಡಿ ಕಣ್ತುಂಬಿಕೊಂಡಿದ್ದಾರೆ ಎಂದರು.
ಕ್ಷೇತ್ರದ ಜನತೆ ಅತ್ಯಂತ ಯಶಸ್ವಿಯಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸ್ವಾಗತಿಸಿದರು. ನನ್ನ ಕ್ಷೇತ್ರದ ಜನತೆಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
270 ಬೂತ್‌ಗಳಲ್ಲೂ ನಮ್ಮ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಈ ಬಾರಿ ಕ್ಷೇತ್ರದ ಜನತೆ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ಆಗಿದೆ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು, ವಿಶ್ವ ನಾಯಕ ಪ್ರಧಾನಿ ಮೋದಿಯವರ ನಾಯಕತ್ವ ಅವರ ಕೊಡುಗೆ ಅಪಾರ ಎಂದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಅಧಿಕಾರಕ್ಕೆ ಬರಬೇಕಂತ ಜನರ ಬಯಕೆಯಿದೆ.
ಬೆಂಗಳೂರಿನಲ್ಲಿ 20ಕ್ಕಿಂತ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದರು.