Advertisement
ಪ್ರಣಾಳಿಕೆಯ ಮುಖ್ಯಾಂಶಗಳು:
- ಬಿಪಿಎಲ್ ಕುಟುಂಬಕ್ಕೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ.
- ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತದೆ.
- ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರವವರನ್ನು ಖಾಯಂ ಕೆಲಸಗಾರರನ್ನಾಗಿ ಮಾಡಲಾಗುತ್ತದೆ. ಆರೋಗ್ಯ & ಕುಟುಂಬ ಕಲ್ಯಾಣದಲ್ಲಿ ಕೆಲಸ ಮಾಡುವ ನೌಕರರ ಉದ್ಯೋಗ ಖಾಯಂ
- ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟಿ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ.
- ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ
- ಆಶಾ ಕಾರ್ಯಕರ್ತೆಯರ ಗೌರವಧನ 8 ರೂ.ಗೆ ಹೆಚ್ಚಳ
- ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕರಿಗೆ ನೆರವು ( 3 ಸಾವಿರ ರೂ ಸಹಾಯಧನ)
- ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು 1 ವರ್ಷದಲ್ಲಿ ಭರ್ತಿ ಮಾಡಲಾಗುತ್ತದೆ.
- ಅಂಗನವಾಡಿ ಕಾರ್ಯಕರ್ತೆಯರ ವೇತನ 15 ರೂ.ಗೆ ಹೆಚ್ಚಿಸಲಾಗುತ್ತದೆ.
- ಕೋಮುಗಳ ನಡುವೆ ಯಾವುದೇ ಬಗೆಯ ದ್ವೇಷ ಬಿತ್ತುವ ಬಜರಂಗದಳ,ಪಿಎಫ್ ಐ ಸೇರಿದಂತೆ ಇತರ ಯಾವುದೇ ಸಂಘಟನೆಗಳಿದ್ದರೂ ಅದನ್ನು ಕಾನೂನು ಅನುಸಾರವಾಗಿ ನಿಷೇಧ ಮಾಡಲಾಗುವುದು.
- ನೀರಾವರಿಗಾಗಿ 5 ವರ್ಷದಲ್ಲಿ 1.50 ಲಕ್ಷ ಕೋಟಿ ರೂ. ಮೀಸಲು
- ಬಿಸಿಯೂಟ ನೌಕರರ ಗೌರಧನ 6 ಸಾವಿರ ರೂ.ಗೆ ಹೆಚ್ಚಳ
- ರಾತ್ರಿಪಾಳಿಯ ಪೊಲೀಸ್ ಸಿಬ್ಬಂದಿ 5000 ರೂ. ವಿಶೇಷ ಭತ್ಯೆ
- ಪ್ರತಿ ಜಿಲ್ಲೆಯಲ್ಲಿ ಸೈಬರ್ ಠಾಣೆ ನಿರ್ಮಾಣದ ಗುರಿ
- ಕನಕಪುರದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
- ಎನ್ ಇಪಿಯನ್ನು ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುವುದು.
- 4 ವರ್ಷದಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ
- ಮುಸ್ಲಿಂಮರ ಶೇ.4 ರಷ್ಟು ಮೀಸಲಾತಿ ಮರುಸ್ಥಾಪನೆ
- ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ಬಸ್ ಸೌಲಭ್ಯ
- ಎಲ್ಲಾ ಪೊಲೀಸರಿಗೆ ವರ್ಷಕ್ಕೆ 1 ತಿಂಗಳ ವೇತನ ಹೆಚ್ಚಳ
- ಎಸ್ ಟಿ ,ಎಸ್ ಸಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಭರವಸೆ
- ನಾಡದೋಣಿ ಮೀನುಗಾರರಿಗೆ 10 ಸಾವಿರ ಹಣಕಾಸಿನ ನೆರವು
- ಮೀನುಗಾರಿಕಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ
- ಮೀನುಗಾರಿಕಾ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
- ಎಸ್ ಸಿ ಸಮುದಾಯ ಮೀಸಲಾತಿ ಶೇ 17 ಹೆಚ್ಚಿಸುವ ಭರವಸೆ,ಎಸ್ ಟಿ ಸಮುದಾಯ ಮೀಸಲಾತಿ ಶೇ. 7 ಹೆಚ್ಚಿಸುವ ಭರವಸೆ
- ಆಟೋ, ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪಿಸುವ ಭರವಸೆ
- ಕೋರ್ಟ್ ಗಳ ಆಧುನಿಕರಣದ ಭರವಸೆ
- ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಭರವಸೆ
- ಮಂಗಳಮುಖಿ ಮಂಡಳಿ ಸ್ಥಾಪಿಸುವ ಭರವಸೆ
Related Articles
Advertisement