ಬೆಂಗಳೂರು: ರಾಜ್ಯ ವಿಧಾನಸಭೆಯ 222 ಕ್ಷೇತ್ರಗಳಲ್ಲಿ ಶನಿವಾರ ಬೆಳಗ್ಗೆ 7 ಗಂಟೆಯಿಂದ ಬಿರುಸಿನ ಶಾಂತಿಯುತ ಮತದಾನ ನಡೆಯುತ್ತಿದೆ. ಕೆಲವೆಡೆ ಮತಯಂತ್ರಗಳ ಸಮಸ್ಯೆ ಕಂಡು ಬಂದ ಬಗ್ಗೆ ವರದಿಯಾಗಿದೆ.
ಶುಕ್ರವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿ,ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸುರಿದು ಅವಾಂತರಗಳನ್ನು ಸೃಷ್ಟಿಸಿ ಜನ ಪರದಾಡುವಂತಾಗಿದೆ.
ಹವಮಾನ ಇಲಾಖೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ಜನರು ಬೆಳಗ್ಗೆಯೇ ಮತದಾನ ಕೇಂದ್ರದತ್ತ ಆಗಮಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಸಿಎಂ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದ್ದಾರೆ.
ಹೆಚ್ಚಿನ ಮತಗಟ್ಟೆಗಳಲ್ಲಿ ಮತದಾರರು ಬೆಳಗ್ಗೆಯೇ ಉತ್ಸಾಹ ತೋರಿದ್ದು, ಸರತಿಯ ಸಾಲುಗಳು ಕಂಡು ಬಂದಿವೆ.
ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.