ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಬುಧವಾರ ನಡೆದಿದ್ದುಎಕ್ಸಿಟ್ ಪೋಲ್‌ಗಳ ಭವಿಷ್ಯ ಕೂಡ ಹೊರಬಿದ್ದಿದ್ದು, ಟುಡೇಸ್ ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ 120 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತವನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದೆ.ಬಿಜೆಪಿಗೆ 92 ಸ್ಥಾನಗಳು ಮತ್ತು ಜೆಡಿಎಸ್‌ಗೆ 12 ಕೇವಲ ಸ್ಥಾನಗಳು ಸಿಗಲಿದೆ ಎಂದು ಸಮೀಕ್ಷೆ ಹೇಳಿದೆ.
ಇದನ್ನೂ ಓದಿ : Karnataka Exit Polls; ಅತಂತ್ರ!!!,ಬಹುಮತವೋ? ; ಸಮೀಕ್ಷೆಗಳು ಹೀಗಿವೆ
ರಾಜ್ಯದಲ್ಲಿ ಸಂಜೆ 5 ರವರೆಗೆ ದಾಖಲಾದ ಮತದಾನದ ಶೇಕಡಾವಾರು ಪ್ರಮಾಣ ನಿರೀಕ್ಷೆಗಿಂತ ಕಡಿಮೆಯಾಗಿದೆ. 65.69% ಮತದಾನವಾಗಿದ್ದು, ಪೂರ್ಣ ಪ್ರಮಾಣದ ವಿವರ ಇನ್ನಷ್ಟೇ ಹೊರ ಬೀಳಬೇಕಿದೆ.
2024 ರ ಲೋಕಸಭೆ ಚುನಾವಣೆಗೆ ಮುನ್ನ ನಡೆದ ವಿಧಾನಸಭೆ ಚುನಾವಣೆ ನಿರ್ಣಾಯಕವೆಂದು ಪರಿಗಣಿಸಲಾಗಿದ್ದು, ಆಡಳಿತಾರೂಢ ಬಿಜೆಪಿ ಆಡಳಿತ ವಿರೋಧಿ ಅಲೆಯ ವಿರುದ್ಧ ಹೋರಾಟ ನಡೆಸುತ್ತಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆಗಳ ಭವಿಷ್ಯವನ್ನು ಬದಲಾಯಿಸಲು ಕಾಂಗ್ರೆಸ್ ಅದ್ಭುತ ಗೆಲುವಿನ ನಿರೀಕ್ಷೆಯಲ್ಲಿದೆ.
ಟುಡೇಸ್ ಚಾಣಕ್ಯ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 42 %, ಬಿಜೆಪಿ 39% , ಜೆಡಿಎಸ್ 13% ಮತ್ತು ಇತರರು 6% ರಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ.
ಇಂಡಿಯಾ ಟುಡೆ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 122-140 ಸ್ಥಾನಗಳನ್ನು ಗೆಲ್ಲಲಿದೆ, ಇದು ಸ್ಪಷ್ಟ ಬಹುಮತ 113 ಸ್ಥಾನಗಳಿಗಿಂತ ಹೆಚ್ಚಾಗಿದೆ. ಬಿಜೆಪಿ 62-80 ಮತ್ತು ಜೆಡಿಎಸ್ 20-25 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.
ಮತ ಹಂಚಿಕೆಯಲ್ಲಿ ಕಾಂಗ್ರೆಸ್ ಶೇ.43, ಬಿಜೆಪಿ ಶೇ.35, ಜೆಡಿಎಸ್ ಶೇ.16 ಮತ್ತು ಇತರರು ಶೇ.8ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ತಿಳಿಸಿದೆ.
ಹಳೆ ಮೈಸೂರು ಪ್ರಾಂತ್ಯದ 64 ಸ್ಥಾನಗಳ ಪೈಕಿ ಕಾಂಗ್ರೆಸ್ 36 ಸ್ಥಾನಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟುಡೇ-ಮೈ ಆಕ್ಸಿಸ್ ಬಿಡುಗಡೆ ಮಾಡಿರುವ ಸಮೀಕ್ಷೆ ಭವಿಷ್ಯ ನುಡಿದಿದೆ. ಜೆಡಿಎಸ್ 18 ಮತ್ತು ಬಿಜೆಪಿ 6 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ.