ಬೆಂಗಳೂರು: ರೈತ ಸಂಘಟನೆ, ರೈತರು, ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಬುಧವಾರ (ಸೆಪ್ಟೆಂಬರ್ 23, 2020) ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರೈತ ಸಂಘಟನೆಗಳು ಸೋಮವಾರ ಬಂದ್ ನಡೆಯಲಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಸೆಪ್ಟೆಂಬರ್ 28ರಂದು ಕರ್ನಾಟಕ ಸಂಪೂರ್ಣ ಬಂದ್:
ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆ ವಿರೋಧಿಸಿ ಸೆಪ್ಟೆಂಬರ್ 28ರಂದು ರಾಜ್ಯಾದ್ಯಂತ ಬಂದ್ ನಡೆಸುವುದಾಗಿ ರೈತ ಸಂಘಟನೆಗಳು ತಿಳಿಸಿವೆ. ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಎಂದು ಹೇಳಿವೆ.
ರೈತ ವಿರೋಧಿ ಕಾನೂನನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತಿದ್ದೇವೆ. ಈ ವಿಧೇಯದಿಂದ ರೈತರಿಗೆ ಅನುಕೂಲವಾಗುತ್ತದೆ ಎಂಬುದು ಸಂಪೂರ್ಣ ಸುಳ್ಳು ಎಂದು ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ. ಶುಕ್ರವಾರ ರಾಜ್ಯದ ಮೂಲೆ, ಮೂಲೆಯಲ್ಲ ರಸ್ತೆ ತಡೆ, ಧರಣಿ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.