Advertisement

Karnatakaಸುವರ್ಣ ಸಂಭ್ರಮ: ಟಾಗೋರ್ ಕಡಲತೀರದಲ್ಲಿ ಗಾಳಿಪಟ ಹಾರಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ

10:06 PM Oct 31, 2023 | Team Udayavani |

ಕಾರವಾರ : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಸಂಭ್ರಮದ ಪ್ರಯುಕ್ತ , ಜಿಲ್ಲೆಯಲ್ಲಿ ವಿಶಿಷ್ಠಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಆಂಗವಾಗಿ ಮಂಗಳವಾರ ಸಂಜೆ ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದಲ್ಲಿ ಆಯೋಜಿಸಿದ್ದ ಕನ್ನಡ ಬಾವುಟದಲ್ಲಿನ ಕೆಂಪು ಮತ್ತು ಹಳದಿ ಬಣ್ಣದಲ್ಲಿ ತಯಾರಿಸಿದ್ದ ಗಾಳಿಪಟಗಳನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹಾರಿಸಿದರು.

Advertisement

ಕೆಂಪು ಹಳದಿ ಗಾಳಿಪಟಗಳನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮುಗಿಲೆತ್ತರದಲ್ಲಿ ಹಾರಾಡಿಸಿ ಸುವರ್ಣ ಸಂಭ್ರಮವನ್ನು ಇಮ್ಮಡಿಗೊಳಿಸಿದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸ್ವತ: ಗಾಳಿಪಟವನ್ನು ಮುಗಿಲಿಗೆ ಹಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸುಮಾರು 30 ನಿಮಿಷಗಳ ಕಾಲ ಬಾನಿನಲ್ಲಿ ಗಾಳಿಪಟ ಹಾರಿಸಿದ ಜಿಲ್ಲಾಧಿಕಾರಿಗಳು ನಂತರ ಮಾತನಾಡಿ, ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಸಂಭ್ರಮವನ್ನು ಜಿಲ್ಲೆಯಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಗಾಳಿಪಟ ಹಾರಿಸುವ ಕಾರ್ಯಕ್ರಮದಲ್ಲಿ 50 ಕ್ಕೂ ಅಧಿಕ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿ, ಕೆಂಪು ಮತ್ತು ಹಳದಿ ಬಣ್ಣದಲ್ಲಿ ತಯಾರಿಸಿದ್ದ ವಿವಿದ ವಿನ್ಯಾಸದ ಗಾಳಿಪಟವನ್ನು ಹಾರಿಸಿ, ಸುವರ್ಣ ಸಂಭ್ರಮಿಸಿದರು.

Advertisement

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next