Advertisement
ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಾಡಿನ ಜನತೆ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಕಾಲ ಮಿತಿಯಲ್ಲಿ ಕೆಲಸ ಮಾಡಿ ಜನರ ನಿರೀಕ್ಷೆ ಈಡೇರಿಸಿ ಎಂದು ಸೂಚಿಸಿದರು.
ಲಾಡಿಸಲು ಅಧಿಕಾರಿಗಳು ಸರಕಾರದೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.
Related Articles
Advertisement
ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೆ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು ಎಂದು ತಿಳಿಸಿದರು.
ನಿಮ್ಮ ಸೇವೆ ಅಮೂಲ್ಯಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ರಾಜ್ಯಕ್ಕೆ ಅಂಟಿರುವ ಕಳಂಕವನ್ನು ತೊಳೆದು ಹಾಕಲು ನೀವು ನಮ್ಮ ಜತೆ ಕೈ ಜೋಡಿಸಬೇಕು. ರಾಜ್ಯ ಆಡಳಿತದಲ್ಲಿ ನಿಮ್ಮ ಸೇವೆಯ ತೂಕವೇ ಹೆಚ್ಚು. ನಿಮ್ಮ ಸೇವೆ ಅಮೂಲ್ಯ. ಆದರೆ ಕಳೆದ ಮೂರೂವರೆ ವರ್ಷದ ಡಬಲ್ ಎಂಜಿನ್ ಸರಕಾರದ ಆಳ್ವಿಕೆಯಲ್ಲಿ ಉತ್ತಮ ಆಡಳಿತ ಎಂಬುದು ಮಾಯವಾಗಿ, ಭ್ರಷ್ಟಾಚಾರದ ರಾಜಧಾನಿ ಎಂಬ ಕಳಂಕ ಬಂದಿದೆ. ನಾವು ಉತ್ತಮ ಆಡಳಿತ, ಸರಕಾರ ನೀಡಲು ಬದ್ಧರಾಗಿದ್ದೇವೆ. ಅದರಲ್ಲಿ ನಿಮ್ಮ ಪಾಲೂ ಇದೆ ಎಂದು ಹೇಳಿದರು. ಸಚಿವರಾದ ಕೆ.ಎಚ್. ಮುನಿಯಪ್ಪ, ಡಾ| ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು. ಜನ ನಮ್ಮ ಪರ ನಿಂತರು
ಅನ್ಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸಂಪನ್ಮೂಲ, ಪ್ರತಿಭೆ, ಆಳ್ವಿಕೆ ಮಾದರಿ ಆದದ್ದು. ದೇವರಾಜ ಅರಸು, ವೀರೇಂದ್ರ ಪಾಟೀಲರ ಕಾಲದಿಂದ ಸಿದ್ದರಾಮಯ್ಯನವರ ಸರಕಾರದ ಅವಧಿಯವರೆಗೂ ಕರ್ನಾಟಕದ ಆಡಳಿತ ಯಾರೊಬ್ಬರೂ ಬೆರಳು ತೋರಿಸದಷ್ಟು ಉತ್ತಮವಾಗಿತ್ತು. ರಾಜಕೀಯ ದ್ವೇಷದಿಂದ ನನ್ನ ಮೇಲೆ ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಪ್ರಯೋಗ ಮಾಡಲಾಗಿದೆ. ಚುನಾವಣೆ ಸಮಯದವರೆಗೂ ಈ ಕಾಟ ತಪ್ಪಲಿಲ್ಲ. ಆದರೆ ಜನ ನಮ್ಮ ಪರ ನಿಂತರು ಎಂದು ಡಿಕೆಶಿ ಹೇಳಿದರು.