Advertisement

ಉತ್ತಮ ಆಡಳಿತ ನೀಡಲು ಕೈ ಜೋಡಿಸಿ: ಅಧಿಕಾರಿಗಳಿಗೆ ಸೂಚನೆ

12:00 AM May 24, 2023 | Team Udayavani |

ಬೆಂಗಳೂರು: ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡಲು ಅಧಿಕಾರಿಗಳು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗ‌ಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಾಡಿನ ಜನತೆ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಕಾಲ ಮಿತಿಯಲ್ಲಿ ಕೆಲಸ ಮಾಡಿ ಜನರ ನಿರೀಕ್ಷೆ ಈಡೇರಿಸಿ ಎಂದು ಸೂಚಿಸಿದರು.

ನನ್ನ ರಾಜಕೀಯ ಜೀವನದಲ್ಲಿ ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರಗಿಸಿಲ್ಲ. ನಿಮ್ಮ ತಪ್ಪಿನಿಂದ ಸರಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸೋದಿಲ್ಲ ಎಂದು ಹೇಳಿದರು.

ಉತ್ತಮ ಸರಕಾರದ ನಿರೀಕ್ಷೆಯಿದ್ದು ಹಿಂದಿನ ಸರಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿದೆ. ಭ್ರಷ್ಟಾಚಾರವಿದೆ ಎಂಬ ಭಾವನೆ ಜನರಲ್ಲಿತ್ತು. ಈ ಭಾವನೆಯನ್ನು ಹೋಗ
ಲಾಡಿಸಲು ಅಧಿಕಾರಿಗಳು ಸರಕಾರದೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಗುಣಮಟ್ಟದ ಕಾಮಗಾರಿಗಳಾಗಬೇಕು. ಕಾಲಮಿತಿಯಲ್ಲೇ ಕೆಲಸಗಳಾಗಬೇಕು. ಕಣ್ಣುಮುಚ್ಚಿ ಕೊಂಡು ಸಹಿ ಹಾಕದೆ ಜನರ ಹಣವನ್ನು ಸರಿಯಾದ ರೀತಿಯಲ್ಲಿ ವೆಚ್ಚ ಮಾಡಬೇಕು ಎಂದು ಹೇಳಿದರು.

Advertisement

ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೆ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು ಎಂದು ತಿಳಿಸಿದರು.

ನಿಮ್ಮ ಸೇವೆ ಅಮೂಲ್ಯ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ರಾಜ್ಯಕ್ಕೆ ಅಂಟಿರುವ ಕಳಂಕವನ್ನು ತೊಳೆದು ಹಾಕಲು ನೀವು ನಮ್ಮ ಜತೆ ಕೈ ಜೋಡಿಸಬೇಕು. ರಾಜ್ಯ ಆಡಳಿತದಲ್ಲಿ ನಿಮ್ಮ ಸೇವೆಯ ತೂಕವೇ ಹೆಚ್ಚು. ನಿಮ್ಮ ಸೇವೆ ಅಮೂಲ್ಯ. ಆದರೆ ಕಳೆದ ಮೂರೂವರೆ ವರ್ಷದ ಡಬಲ್‌ ಎಂಜಿನ್‌ ಸರಕಾರದ ಆಳ್ವಿಕೆಯಲ್ಲಿ ಉತ್ತಮ ಆಡಳಿತ ಎಂಬುದು ಮಾಯವಾಗಿ, ಭ್ರಷ್ಟಾಚಾರದ ರಾಜಧಾನಿ ಎಂಬ ಕಳಂಕ ಬಂದಿದೆ. ನಾವು ಉತ್ತಮ ಆಡಳಿತ, ಸರಕಾರ ನೀಡಲು ಬದ್ಧರಾಗಿದ್ದೇವೆ. ಅದರಲ್ಲಿ ನಿಮ್ಮ ಪಾಲೂ ಇದೆ ಎಂದು ಹೇಳಿದರು.

ಸಚಿವರಾದ ಕೆ.ಎಚ್‌. ಮುನಿಯಪ್ಪ, ಡಾ| ಜಿ. ಪರಮೇಶ್ವರ್‌, ಎಂ.ಬಿ. ಪಾಟೀಲ್‌, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್‌ ಖರ್ಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.

ಜನ ನಮ್ಮ ಪರ ನಿಂತರು
ಅನ್ಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸಂಪನ್ಮೂಲ, ಪ್ರತಿಭೆ, ಆಳ್ವಿಕೆ ಮಾದರಿ ಆದದ್ದು. ದೇವರಾಜ ಅರಸು, ವೀರೇಂದ್ರ ಪಾಟೀಲರ ಕಾಲದಿಂದ ಸಿದ್ದರಾಮಯ್ಯನವರ ಸರಕಾರದ ಅವಧಿಯವರೆಗೂ ಕರ್ನಾಟಕದ ಆಡಳಿತ ಯಾರೊಬ್ಬರೂ ಬೆರಳು ತೋರಿಸದಷ್ಟು ಉತ್ತಮವಾಗಿತ್ತು. ರಾಜಕೀಯ ದ್ವೇಷದಿಂದ ನನ್ನ ಮೇಲೆ ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಪ್ರಯೋಗ ಮಾಡಲಾಗಿದೆ. ಚುನಾವಣೆ ಸಮಯದವರೆಗೂ ಈ ಕಾಟ ತಪ್ಪಲಿಲ್ಲ. ಆದರೆ ಜನ ನಮ್ಮ ಪರ ನಿಂತರು ಎಂದು ಡಿಕೆಶಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next