Advertisement

ಹೊಸ ವರ್ಷಕ್ಕೆ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

09:13 PM Dec 29, 2022 | Team Udayavani |

ಬೆಂಗಳೂರು: ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸುವಂತೆ ಸರಕಾರ ಸಕ್ಕರೆ ಕಾರ್ಖಾನೆಗಳಿಗೆ ಆದೇಶ ನೀಡಿದೆ.

Advertisement

ಎಫ್ಆರ್‌ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಲಾಗಿದೆ. ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಂದಾಯವಾಗಲಿದೆ.

ಈ ಮುನ್ನ ರಾಜ್ಯ ಸರ್ಕಾರ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂಪಾಯಿ ಪಾವತಿಸಲು ಆದೇಶಿಸಿತ್ತು.

ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್ಆರ್‌ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಆರನೇ ಬಾರಿಗೆ ಇಸ್ರೇಲ್‌ನ ಪ್ರಧಾನ ಮಂತ್ರಿಯಾಗಿ ನೆತನ್ಯಾಹು ಪ್ರಮಾಣವಚನ

Advertisement
Advertisement

Udayavani is now on Telegram. Click here to join our channel and stay updated with the latest news.

Next