Advertisement

ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.75 ತುಟ್ಟಿಭತ್ಯೆ ಹೆಚ್ಚಳ : ಜನವರಿಯಿಂದಲೇ ಪೂರ್ವಾನ್ವಯ

01:43 PM Apr 05, 2022 | Team Udayavani |

ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ಜನವರಿ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ “ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

ತುಟ್ಟಿಭತ್ಯೆಯನ್ನು ಶೇ 5ರಷ್ಟು ಹೆಚ್ಚಿಸಬೇಕು ಎಂದು ಸರ್ಕಾರಿ ನೌಕರರು ಮನವಿ ಮಾಡಿದ್ದರು. ಆದರೆ ಸರ್ಕಾರವು ಶೇ 2.75ರಷ್ಟು ತುಟ್ಟಿಭತ್ಯೆಗೆ ಸಮ್ಮತಿಸಿದೆ.

ಇತ್ತೀಚಿಗೆ ಕೇಂದ್ರ ಸರಕಾರವು ತನ್ನ ನೌಕರರಿಗೆ ಶೇ.3 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next