Advertisement

ಶೇ 50 ರಷ್ಟು ಕಾರ್ಮಿಕರನ್ನು ಬಳಸಿ ಗಾರ್ಮೆಂಟ್ಸ್‌ ತೆರೆಯಲು ಸರ್ಕಾರದ ಅನುಮತಿ

07:28 PM Apr 28, 2021 | Team Udayavani |

ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಘೋಷಣೆ ಹಿನ್ನೆಲೆಯಲ್ಲಿ ಗಾರ್ಮೆಂಟ್ಸ್‌ ಫ್ಯಾಕ್ಟರಿಗಳಿಗೆ ಹೇರಿದ್ದ ನಿರ್ಬಂಧವನ್ನು ಸರ್ಕಾರ ಸಡಿಲಗೊಳಿಸಿದ್ದು, ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.

Advertisement

ಕೊರೊನಾ ಲಾಕ್‌ಡೌನ್‌ ಮಾರ್ಗಸೂಚಿಯಲ್ಲಿ ಉಳಿದ ಕಾರ್ಖಾನೆಗಳಿಗೆ ಕೊರೊನಾ ನಿಯಮ ಪಾಲಿಸಿ ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಉತ್ಪಾದನಾ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಿದ್ದ ರಾಜ್ಯ ಸರ್ಕಾರ ಗಾರ್ಮೆಂಟ್‌ ಫ್ಯಾಕ್ಟರಿಗಳನ್ನು ಸಂಪೂರ್ಣವಾಗಿ ಬಂದ್‌ ಮಾಡುವಂತೆ ಆದೇಶ ಮಾಡಿತ್ತು.

ಇದರಿಂದ ಅಸಮಧಾನಗೊಂಡಿದ್ದ ಗಾರ್ಮೆಂಟ್‌ ಫ್ಯಾಕ್ಟರಿ ಅಸೋಷಿಯೇಷನ್‌ ವತಿಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿ, ಸಂಪೂರ್ಣ ಬಂದ ಮಾಡುವುದರಿಂದ ಗಾರ್ಮೆಂಟ್‌ ಉದ್ಯಮ ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ. ಅಲ್ಲದೇ ಇಲ್ಲಿನ ಉದ್ಯೋಗಿಗಳ ಜೀವನ ನಿರ್ವಹಣೆ ಕಷ್ಟವಾಗಲಿದೆ. ಹೀಗಾಗಿ ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರು. ಅವರ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕೊರೊನಾ ನಿಯಮವನ್ನು ಪಾಲಿಸಿ ಗಾರ್ಮೆಂಟ್‌ ಚಟುವಟಿಕೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಗಾರ್ಮೆಂಟ್‌ ಕೆಲಸಕ್ಕೆ ಹಾಜರಾಗುವ ಕಾರ್ಮಿಕರಿಗೆ ಸಂಬಂಧ ಪಟ್ಟ ಫ್ಯಾಕ್ಟರಿಯಿಂದ ಪಾಸ್‌ ನೀಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಕೋವಿಡ್ ಸೋಂಕು ದೃಢಪಟ್ಟವರಲ್ಲಿ ಶೇ.20ರಷ್ಟು ಜನರ ಮೊಬೈಲ್‌ ಸ್ವಿಚ್‌ಆಫ್ ; ಆರ್‌. ಅಶೋಕ್‌

Advertisement

Udayavani is now on Telegram. Click here to join our channel and stay updated with the latest news.

Next