ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ರಾಜ್ಯ ಸರ್ಕಾರ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಿದೆ.
ರಾಜ್ಯ ಸರ್ಕಾರ ಇಂದು ಈ ಬಗ್ಗೆ ಆದೇಶ ಹೊರಡಿಸಿದೆ. ಜು.25ರಿಂದ ಈ ಆದೇಶ ಜಾರಿಯಾಗಲಿದೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 39,097 ಕೋವಿಡ್ ಪ್ರಕರಣ ಪತ್ತೆ, 546 ಮಂದಿ ಸಾವು
ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಧಾರ್ಮಿಕ ಕಾರ್ಯಗಳನ್ನು ನಡೆಸಲು ಅನುಮತಿಸಲಾಗಿದೆ. ಆದರೆ ಜಾತ್ರೆ, ಮೆರವಣಿಗೆಗಳನ್ನು ನಡೆಸಲು ಅನುಮತಿಯಿಲ್ಲ.
ಅಮ್ಯೂಸ್ ಮೆಂಟ್ ಪಾರ್ಕ್ ಸೇರಿದಂತೆ ಇದೇ ತೆರನಾದ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಇಲ್ಲಿಯೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತಿದೆ. ಆದರೆ ವಾಟರ್ ಸ್ಪೋರ್ಟ್ ಗಳಿಗೆ ಅವಕಾಶವಿಲ್ಲ.