Advertisement

Karnataka Government: ಮೂರು ತಿಂಗಳಿಗೊಮ್ಮೆ ದೌರ್ಜನ್ಯ ತಡೆ ಸಮಿತಿ ಸಭೆ ನಡೆಸಿ

12:10 AM Jul 10, 2024 | Team Udayavani |

ಬೆಂಗಳೂರು: ಉಪವಿಭಾಗಾಧಿಕಾರಿ ನೇತೃತ್ವದ ದೌರ್ಜನ್ಯ ತಡೆ ಸಮಿತಿಯು ನಿಯಮಿತವಾಗಿ ಸಭೆಗಳನ್ನು ನಡೆಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೂರು ತಿಂಗಳಿಗೊಮ್ಮೆ ಸಭೆ ನಡೆಸುವುದನ್ನು ಯಾವುದೇ ಕಾರಣಕ್ಕೂ ತಪ್ಪಿಸಬಾರದು ಎಂದು ಕಟ್ಟಾಜ್ಞೆ ಹೊರಡಿಸಿದರು.

Advertisement

ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ದೌರ್ಜನ್ಯ ತಡೆ ಸಮಿತಿ ಸಭೆಯನ್ನೇ ನಡೆಸದ 13 ಉಪ ವಿಭಾಗಗಳ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಖಾರವಾಗಿ ಪ್ರಶ್ನಿಸಿದ ಸಿಎಂ, ಸಭೆಯನ್ನೇ ನಡೆಸದಿದ್ದರೆ ಸಂತ್ರಸ್ತರಿಗೆ ನ್ಯಾಯ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದರು. ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು ಎಂದರು.

ಸಿಂಧುತ್ವ ಪ್ರಮಾಣ ಪತ್ರವನ್ನು 1 ತಿಂಗಳ ಒಳಗಾಗಿ ನೀಡಬೇಕು. 2,684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತತ್‌ಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು. ಅಂಬೇಡ್ಕರ್‌ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next