Advertisement

DK Shivakumar ವಿರುದ್ಧದ ಸಿಬಿಐ ತನಿಖೆ ಹಿಂಪಡೆಯಲು ಸಂಪುಟ ನಿರ್ಧಾರ

09:05 PM Nov 23, 2023 | Team Udayavani |

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯಲು ರಾಜ್ಯ ಗೃಹ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕರ್ನಾಟಕ ಸರಕಾರ ಗುರುವಾರ ಅನುಮೋದನೆ ನೀಡಿದೆ.

Advertisement

ಡಿಸಿಎಂ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯಲು ರಾಜ್ಯ ಗೃಹ ಇಲಾಖೆ ಪ್ರಸ್ತಾವನೆ ಸಲ್ಲಿಸಿದ ನಂತರ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿದೆ.

ಸಿಬಿಐ ತನಿಖೆಯನ್ನು ಹಿಂಪಡೆಯಲು ಕೋರಿದ್ದಲ್ಲದೆ, ತನಿಖೆಯನ್ನು ರಾಜ್ಯ ಪೊಲೀಸ್ ಇಲಾಖೆಗೆ ಒಪ್ಪಿಸುವಂತೆಯೂ ಪ್ರಸ್ತಾವನೆಯಲ್ಲಿ ಕೋರಲಾಗಿದೆ.

ಸಂಪುಟ ನಿರ್ಣಯದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿರಲಿಲ್ಲ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next