Advertisement

ಸಿನಿಪ್ರಿಯರಿಗೆ ಸಿಹಿಸುದ್ದಿ,ಮಲ್ಟಿಫ್ಲೆಕ್ಸ್ ಸಿನಿಮಾ ಟಿಕೆಟ್ ದರ 200

06:42 PM May 02, 2017 | Team Udayavani |

ಬೆಂಗಳೂರು:ನಿರೀಕ್ಷೆಯಂತೆ ಸಿನಿಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಹೊರಹಾಕಿದೆ. ಮಲ್ಟಿಫ್ಲೆಕ್ಸ್ ಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಟಿಕೆಟ್ ದರವನ್ನು ಗರಿಷ್ಠ 200 ರೂಪಾಯಿಗೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

Advertisement

ಇಂದಿನಿಂದಲೇ ಗರಿಷ್ಠ ದರ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ಜಾರಿಯಾದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮಲ್ಪಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ 200 ರೂ. ದರ ನಿಗದಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಕಟಿಸಿದ್ದರು. ಅದರಂತೆ ಇದೀಗ ಸಿಎಂ ಆದೇಶಕ್ಕೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದ್ದ ಹಿನ್ನೆಲೆಯಲ್ಲಿ ಅಧಿಕೃತವಾಗಿ ಅಧಿಸೂಚನೆ ಹೊರಬಿದ್ದಿದೆ.

ಆದರೆ ಈ ಆದೇಶ ಗೋಲ್ಡ್ ಸ್ಕ್ರೀನ್ ಮತ್ತು ಗೋಲ್ಡ್ ಕ್ಲಾಸ್ ಸೀಟು ಗಳಿಗೆ(ಶೇ.10ರಷ್ಟು ವಿನಾಯ್ತಿ ನೀಡಿದೆ) ಅನ್ವಯಿಸುವುದಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next