Advertisement

Karnataka Governor ಅ. 3ರಂದು ಕೋಟಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಭೇಟಿ

11:42 PM Sep 26, 2023 | Team Udayavani |

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‌, ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕಾರಂತ ಟ್ರಸ್ಟ್‌ ಉಡುಪಿ ಸಹಯೋಗದಲ್ಲಿ ಅ. 3ರಂದು ಕೋಟದ ಕಾರಂತ ಕಲಾಭವನದಲ್ಲಿ ನಡೆಯಲಿರುವ ಡಾ| ಶಿವರಾಮ ಕಾರಂತ ಜನ್ಮದಿನೋತ್ಸವದ ಉದ್ಘಾಟನೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಆಗಮಿಸಲಿದ್ದಾರೆ.

Advertisement

ಅ. 3ರಿಂದ 10ರ ತನಕ ನಡೆಯಲಿರುವ ಕಾರ್ಯಕ್ರಮದ ಉದ್ಘಾಟ ನೆಯು ಅ. 3ರಂದು ಬೆಳಗ್ಗೆ 10.30ಕ್ಕೆ ನೆರವೇರಲಿದೆ. ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್‌. ಹೆಬ್ಬಾಳ್ಕರ್‌, ಜಿಲ್ಲೆಯ ಶಾಸಕರು, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್‌ ಕುಂದರ್‌ ಉಪಸ್ಥಿತರಿರುವರು ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್‌ ಸಿ. ಕುಂದರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next