ಬೆಂಗಳೂರು: ಬಲವಂತ ಹಾಗೂ ಆಮಿಷದ ಮತಾಂತರ ನಿಷೇಧಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ವಿಧೇಯಕ-2022’ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದೆ.
ವಿಧೇಯಕಕ್ಕೆ ಸೆ.28ರಂದು ರಾಜ್ಯಪಾಲರು ಅನುಮೋದನೆ ನೀಡಿದ್ದು, ಅದನ್ನು ರಾಜ್ಯ ಸರ್ಕಾರ ಸೆ.30ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಕಳೆದ ವರ್ಷ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರಪಡೆಯಲಾಗಿತ್ತು. ಆದರೆ, ವಿಧಾನಪರಿಷತ್ತಿನಲ್ಲಿ ಅಂಗೀಕಾರ ಸಾಧ್ಯವಾಗಿರಲಿಲ್ಲ. ಇದೇ ಸೆ.17ರಂದು ಕೆಲವು ತಿದ್ದುಪಡಿಗಳೊಂದಿಗೆ ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಗೊಂಡಿತ್ತು.
ಸೆ.21ರಂದು ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು. ಇದೀಗ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅಧಿಕೃತ ಮುದ್ರೆ ಬಿದ್ದಂತಾಗಿದೆ.