Advertisement
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ವರಿಷ್ಠರು ಸಮಯ ನೀಡಿದರೆ ದಿಲ್ಲಿಗೆ ತೆರಳಿ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲು ಚಿಂತನೆ ನಡೆಸಿದ್ದಾರೆ.
Related Articles
ಸಿಎಂ ಬೊಮ್ಮಾಯಿ ಸಂಪುಟ ಪುನಾರಚನೆ ಕುರಿತು ಪಕ್ಷದ ವರಿಷ್ಠರ ಜತೆ ಚರ್ಚಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಬಿಜೆಪಿಯ ಒಂದು ಮೂಲದ ಪ್ರಕಾರ ಪಂಚ ರಾಜ್ಯಗಳ ಚುನಾ ವಣೆ ಹಿನ್ನೆಲೆಯಲ್ಲಿ ವರಿಷ್ಠರು ಈ ವಿಚಾರದಲ್ಲಿ ಹೆಚ್ಚು ತಲೆ ಕೆಡಿಸಿಕೊಳ್ಳುವ ಸಾಧ್ಯತೆ ಕಡಿಮೆ.
Advertisement
ನಿಗಮ: ಅಧ್ಯಕ್ಷರು ಬದಲು?ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಿ, ಪಕ್ಷದ ಇತರ ಕಾರ್ಯ ಕರ್ತರಿಗೆ ಅವಕಾಶ ಮಾಡಿಕೊಡಲು ಬುಧವಾರ ತಡರಾತ್ರಿ ನಡೆದ ಸಿಎಂ ಮತ್ತು ನಳಿನ್ ನಡುವಿನ ಸಭೆಯಲ್ಲಿ ನಿರ್ಧರಿಸಲಾಗಿದೆ. 32 ಜನರನ್ನು ಬದಲಾಯಿಸುವ ಸಾಧ್ಯತೆಯಿದೆ. ಶಾಸಕರು ನಿಗಮ ಅಧ್ಯಕ್ಷರಾಗಿರುವಲ್ಲಿ ಬದಲಾವಣೆ ಇಲ್ಲ ಎಂದು ತಿಳಿದುಬಂದಿದೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ.
-ಬಸವರಾಜ ಬೊಮ್ಮಾಯಿ,
ಮುಖ್ಯಮಂತ್ರಿ