Advertisement
ಪ್ರಸಕ್ತ ಸರಕಾರದ ಅವಧಿಯಲ್ಲಿ ನಡೆಯುತ್ತಿರುವ ಕೊನೆಯ ಅಧಿವೇಶನ ಸಂದರ್ಭದಲ್ಲೇ, ಈ ಭಾಗದ 13 ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿ 5,701.38 ಕೋಟಿ ರೂ. ಮಂಜೂರು ಮಾಡಲಾಗಿದೆ. ಇದರಿಂದ ಕಾಲಮಿತಿ ಯಲ್ಲಿ ಯೋಜನೆ ಪೂರ್ಣಗೊಳ್ಳಲು ಸಹಾಯವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
- 365 ಕೋಟಿ ರೂ – ಕಲಬುರಗಿ ನಗರಕ್ಕೆ ಕುಡಿಯುವ ನೀರು ಪೂರೈಸಲು ಹುನಗುಂಟಾ ಗ್ರಾಮದ ಹತ್ತಿರ ಕಾಗಿಣಾ ನದಿಯ ಬಲದಂಡೆ ಯಲ್ಲಿ ಜಾಕ್ವೆಲ್ ಕಂ ಪಂಪ್ ಹೌಸ್ ನಿರ್ಮಿಸಿ, ಬೆಣ್ಣೆತೋರಾ ಜಲಾಶಯಕ್ಕೆ ತುಂಬಿಸುವುದು.
- 197 ಕೋಟಿ ರೂ – ಬಾಗಲಕೋಟೆಯ ಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಪೂರೈಕೆ ಮತ್ತು ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ ಯೋಜನೆ.
- 41 ಕೋಟಿ ರೂ – ಬೆಳಗಾವಿ ಜಿಲ್ಲೆಯ ಅಮ್ಮಾ ಜೇಶ್ವರಿ (ಕೊಟ್ಟಲಗಿ) ಏತ ನೀರಾವರಿ ಯೋಜನೆ
- 520 ಕೋಟಿ ರೂ- ಕಿತ್ತೂರಿನಶ್ರೀ ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆ
- 546 ಕೋಟಿ ರೂ- ಸವದತ್ತಿ ತಾಲ್ಲೂಕಿನ ಶ್ರೀ ಸತ್ತೀಗೇರಿ ಏತ ನೀರಾವರಿ ಯೋಜನೆ
- 70 ಕೋಟಿ ರೂ- ಔರಾದ ತಾಲೂಕಿನ ಬಳತ (ಬಿ) ಹತ್ತಿರ ಹಾಲಹಳ್ಳಿ ಬ್ಯಾರೇಜ್ ಬಳಿ ಕೆರೆಗಳನ್ನು ನೀರು ತುಂಬಿಸುವುದು.
- 50 ಕೋಟಿ ರೂ – ಉತ್ತರಕನ್ನಡ ಜಿಲ್ಲೆಯ ಬೇಡ್ತಿ ನದಿ ಪಾತ್ರದಿಂದ ನೀರನ್ನು ಲಿಫ್ಟ್ ಮಾಡಿ 100 ಕೆರೆಗಳನ್ನು ತುಂಬಿಸುವ ಯೋಜನೆ.