Advertisement
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರ ರಾತ್ರಿ ಈ ನಿರ್ಣಯಕ್ಕೆ ಅಂಗೀಕಾರ ನೀಡಲಾಗಿದ್ದು, ಆ.1ರಿಂದ ಅನ್ವಯವಾಗುವಂತೆ ವೇತನ ಆಯೋಗದ ಶಿಫಾರಸು ಜಾರಿಗೊಳ್ಳಲಿದೆ. ಶೇ. 27.5ರಷ್ಟು ವೇತನ ಪರಿಷ್ಕರಣೆಗೆ ಆಯೋಗ ಸೂಚಿಸಿತ್ತು. ಅದನ್ನು ಸಚಿವ ಸಂಪುಟ ಒಪ್ಪಿಕೊಂಡಿದೆ.
ಸಂಪುಟ ಸಭೆಯ ಬಳಿಕವೂ ಸಿಎಂ ಸಿದ್ದರಾಮಯ್ಯ ಸಚಿವರ ಜತೆಗೆ ಸುದೀರ್ಘ ಸಭೆ ನಡೆಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಸಂಪುಟ ಸಭೆಯಿಂದ ಹೊರಬಂದ ಬಳಿಕ ಸಿದ್ದರಾಮಯ್ಯ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಪ್ರಮುಖ ಸಚಿವರ ಜತೆಗೆ ಅಧಿವೇಶನದಲ್ಲಿ ವಿಪಕ್ಷದವರನ್ನು ಕಟ್ಟಿ ಹಾಕುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು.
Related Articles
-ರಾಜ್ಯದ ಸರಕಾರದ ಮುಖ್ಯ ಕಾರ್ಯದರ್ಶಿ ನೇಮಕ ಅಧಿಕಾರ ಮುಖ್ಯಮಂತ್ರಿಗಳಿಗೆ.
-ಕರ್ನಾಟಕ (ತಿದ್ದುಪಡಿ) ಉಪಖನಿಜ ನಿಯಮಗಳು, ಅನುಮೋದನೆ ನೀಡುವ ಮಸೂದೆ ಮಂಡನೆ.
-ಕಲ್ಲು ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ಖನಿಜವನ್ನು ತೆಗೆದು ರಾಜಧನವನ್ನು ಪಾವತಿಸದೆ ಸಾಗಾಣಿಕೆ ಮಾಡಿರುವುದಕ್ಕೆ ದಂಡ ವಿಧಿಸುವುದು.
-ಗುತ್ತಿಗೆ ಪ್ರದೇಶವನ್ನು ಒತ್ತುವರಿ ಸಂಬಂಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವಿಧಿಸಿರುವ (ಒಂದು ಬಾರಿಗೆ) ಮೂಲಕ ಅನುಷ್ಠಾನಗೊಳಿಸುವ ಕುರಿತು ರಚಿಸ ಲಾಗಿದ್ದ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸು.
-ಕರ್ನಾಟಕ ಲೋಕಾಯುಕ್ತ ಸಂಸ್ಥೆಯ 2022-23ನೇ ಸಾಲಿನ 37ನೇ ಸಂಚಿತ ವಾರ್ಷಿಕ ವರದಿ ಬಗ್ಗೆ ಚರ್ಚೆ.
-ಕರ್ನಾಟಕ ಸರಕು ಮತ್ತು ಸೇವೆಗಳು (ತಿದ್ದುಪಡಿ) ಮಸೂದೆಗೆ ಅನುಮೋದನೆ ನೀಡುವುದು.
-ರಾಜ್ಯದ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮ್ಯಾಮೊಗ್ರಾಫಿ ಯಂತ್ರಗಳ ಅಳವಡಿಕೆ.
-ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿಯನ್ನು 12.50 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
-ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ, 2024ಕ್ಕೆ ಅನುಮೋದನೆ ನೀಡುವುದು.
Advertisement