Advertisement
ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕ ಮಾಡಿದ್ದ ಉಪಸಮಿತಿ, ಸಲಹಾ ಸಮಿತಿ ಅರ್ಜಿ ಪ್ರಕ್ರಿಯೆಯ ಪರಿಶೀಲನೆ ಪೂರ್ಣಗೊಳಿಸಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ ನಡೆಯಲಿದ್ದು ಇಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
Related Articles
ಈಗಾಗಲೇ ನಾಗಮೋಹನ್ ದಾಸ್ ಸಮಿತಿ ನೀಡಿರುವ ಶಿಫಾರಸಿನ ಮಾನದಂಡಗಳಂತೆ ಪ್ರತಿ ಜಿಲ್ಲೆಗೂ ಒಂದು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜತೆಗೆ ರಂಗಭೂಮಿ, ಸಂಗೀತ-ನೃತ್ಯ, ಜಾನಪದ, ಚಲನಚಿತ್ರ, ಕಿರುತೆರೆ, ಚಿತ್ರಕಲೆ-ಶಿಲ್ಪಕಲೆ, ಯಕ್ಷಗಾನ-ಬಯಲಾಟದ ಸಾಧಕರನ್ನು ಗುರುತಿಸಲಾಗುತ್ತಿದೆ. ಹಾಗೆಯೇ ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಸಹಕಾರ, ವೈದ್ಯಕೀಯ, ಶಿಕ್ಷಣ ಕ್ಷೇತ್ರದ ಸಾಧಕರನ್ನು ಕೂಡ ಆಯ್ಕೆ ಮಾಡಿ ಗೌರವಿಸಲಾಗುತ್ತಿದೆ.
Advertisement
ಕೆಲವು ಅಚ್ಚರಿ ಆಯ್ಕೆಗಳು ಇರಬಹುದು:ಸರ್ಕಾರ ಈಗಾಗಲೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಮಾಡದ ಎಲೆಮರೆ ಕಾಯಿಯಂತಿರುವವರನ್ನು ಕೂಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವುದಾಗಿ ಹೇಳಿದೆ. ಆ ಹಿನ್ನೆಲೆಯಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕೂಡ ಇರಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.