Advertisement
ಟಿಪ್ಪು ಜಯಂತಿ ವಿರೋಧಿಸಿ ಹಿಂದೂಪರ ಸಂಘಟನೆಗಳು ಸಹಿತ ಹಲವು ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುರುವಾರದಿಂದ ಶನಿವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ವಾಗಿ ಟಿಪ್ಪು ಜಯಂತಿ ಆಚರಣೆಗೆ ಮಾತ್ರ ಸರಕಾರ ಅವಕಾಶ ಕಲ್ಪಿಸಿದೆ. ಈ ವೇಳೆ ಯಾವುದೇ ರ್ಯಾಲಿ, ಪಾದಯಾತ್ರೆ, ಮೆರವಣಿಗೆ ನಡೆಸುವಂತಿಲ್ಲ. ಅಲ್ಲದೆ, ಟಿಪ್ಪು ಜಯಂತಿ ವಿರುದ್ಧ ಹೋರಾಟಕ್ಕೂ ಅವಕಾಶ ನೀಡಿಲ್ಲ. ನಿಷೇಧಾಜ್ಞೆ ಉಲ್ಲಂ ಸಿ ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದು, ಈ ಕುರಿತು ಎಲ್ಲ ಜಿಲ್ಲಾಡಳಿತಗಳಿಗೂ ಸರಕಾರದಿಂದ ನಿರ್ದೇಶ ನೀಡಲಾಗಿದೆ. ಟಿಪ್ಪು ಜಯಂತಿ ವೇಳೆ ಕಳೆದ ಎರಡು ವರ್ಷ ಕಹಿ ಘಟನೆಗಳು ನಡೆದಿದ್ದು, ಇಬ್ಬರು ಹತ್ಯೆಯಾಗಿದ್ದರು. ಹೊರ ರಾಜ್ಯಗಳಿಂದ ಬಂದಿದ್ದ ದುಷ್ಕರ್ಮಿಗಳು ಹಿಂಸಾಚಾರಕ್ಕೆ ಪ್ರಯತ್ನಿಸಿದ್ದರು. ಹೀಗಾಗಿ ಈ ವರ್ಷ ರಾಜ್ಯದ ಗಡಿ ಭಾಗ ಸಹಿತ ಚೆಕ್‌ಪೋಸ್ಟ್‌ಗಳಲ್ಲಿ ಹೊರ ರಾಜ್ಯದಿಂದ ರಾಜ್ಯಕ್ಕೆ ಬರುತ್ತಿರುವವರ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ.
Related Articles
Advertisement
ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಹಿಂದೂಪರ ಸಂಘಟನೆಗಳು, ಕೊಡವ ಸಮಾಜ ಸಹಿತ ಹಲವು ಸಂಘ-ಸಂಸ್ಥೆಗಳು ಕೊಡಗು ಬಂದ್‌ಗೆ ಕರೆ ನೀಡಿವೆ. ಇನ್ನೊಂದೆಡೆ ಕೊಡಗು, ದಕ್ಷಿಣ ಕನ್ನಡ, ಚಿತ್ರದುರ್ಗ ಸಹಿತ ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆಗೂ ಕರೆ ನೀಡಲಾಗಿದೆ. ಹೀಗಾಗಿ ಶಾಂತಿಭಂಗವಾಗದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ರುವ ಜಿಲ್ಲಾಡಳಿತಗಳು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿವೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ಪೊಲೀಸರನ್ನು ನಿಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ
ಒಂದೆಡೆ ಟಿಪ್ಪು ಜಯಂತಿಯಾದರೆ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ಬಿಜೆಪಿಯ ನವಕರ್ನಾಟಕ ನಿರ್ಮಾಣ ಪರಿವರ್ತನ ಯಾತ್ರೆಯೂ ಸಂಚ ರಿಸಲಿದ್ದು, ಮೂರೂ ಕಡೆ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರ ಜತೆಗೆ ಕೆಎಸ್‌ಆರ್‌ಪಿ ತುಕಡಿಗಳನ್ನೂ ನಿಯೋಜಿಸಲಾಗಿದೆ. ಅಲ್ಲದೆ, ಪರಿವರ್ತನ ಯಾತ್ರೆ ಯಲ್ಲಿ ಪಾಲ್ಗೊಳ್ಳುವವರು ರ್ಯಾಲಿ, ಮೆರವಣಿಗೆ ಗಳನ್ನು ನಡೆಸದಂತೆ ನಿರ್ದೇಶನ ನೀಡಲಾಗಿದೆ.