Advertisement
ನಗರದ ಅರಮನೆ ಆವರಣದಲ್ಲಿ ಹಮ್ಮಿಕೊಂಡ ಮೂರು ದಿನಗಳ “ಬೆಂಗಳೂರು ಟೆಕ್ ಸಮಿಟ್-2024’ಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕವು ದೇಶದ ಮೊದಲ “ಜಾಗತಿಕ ಸಾಮರ್ಥ್ಯ ಕೇಂದ್ರ’ಗಳು (ಜಿಸಿಸಿ) ನೀತಿಯನ್ನು ಜಾರಿಗೆ ತರುತ್ತಿದೆ. ಇದರ ಮುಂದುವರಿದ ಭಾಗವಾಗಿ ರಾಜ್ಯದ ಮೂರು ಜಿಲ್ಲೆಗಳನ್ನು “ಜಾಗತಿಕ ಆವಿಷ್ಕಾರ ಜಿಲ್ಲೆ’ಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
Related Articles
Advertisement
25 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕರ್ನಾಟಕವು ಆ್ಯನಿಮೇಷನ್, ವಿಜ್ಯುವಲ್ ಎಫೆಕ್ಟ್, ಗೇಮಿಂಗ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ ವಲಯಗಳಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸುತ್ತಿದೆ. ಈ ವಲಯದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡಿರುವ ರಾಜ್ಯ 2025ರ ವೇಳೆಗೆ ಈ ಕ್ಷೇತ್ರದಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಿದೆ ಎಂದು ಹೇಳಿದರು. ಐಟಿ ದಿಗ್ಗಜರಾದ ಅಜೀಂ ಪ್ರೇಮ್ಜೀ ಮತ್ತು ನಾರಾಯಣಮೂರ್ತಿ ಅವರು ಬೆಂಗಳೂರು ಹೊರತುಪಡಿಸಿ ಬೇರೆ ನಗರಗಳನ್ನು ಆಯ್ಕೆ ಮಾಡಿಕೊಂಡಿದ್ದರೆ, ರಾಜಧಾನಿಯು ಐಟಿ ಹಬ್ ಆಗಿ ಬೆಳೆಯುತ್ತಿರಲಿಲ್ಲ. ಸಾವಿರಾರು ಜನರು ತಮ್ಮ ಸ್ಟಾರ್ಟ್ಅಪ್ಗಳಿಗೆ ಬೆಂಗಳೂರನ್ನು ಆಯ್ಕೆ ಮಾಡದೆ ಇದ್ದಿದ್ದರೆ ಬೆಂಗಳೂರು ಲಕ್ಷಾಂತರ ಜನರಿಗೆ ಆಸರೆ ಒದಗಿಸುತ್ತಿರಲಿಲ್ಲ ಎಂದು ಸ್ಮರಿಸಿದರು. ನಿಪುಣ ಕರ್ನಾಟಕ ಯೋಜನೆಗೆ ಚಾಲನೆ
ಬೆಂಗಳೂರು: ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್ನಲ್ಲಿ ಸರಕಾರದ ಮಹತ್ವಾಕಾಂಕ್ಷಿ “ನಿಪುಣ ಕರ್ನಾಟಕ’ ಯೋಜನೆಗೆ ಚಾಲನೆ ನೀಡಲಾಯಿತು. ಯೋಜನೆ ಅಡಿ ಮೈಕ್ರೋಸಾಫ್ಟ್, ಇಂಟೆಲ್, ಆ್ಯಕ್ಸೆಂಚರ್, ಐಬಿಎಂ ಮತ್ತು ಬಿಎಫ್ಎಸ್ ಕಾಂಸಾರ್ಟಿಯಂ ಐದು ದೈತ್ಯ ಐಟಿ ಕಂಪೆನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡ ಸರಕಾರ, ಅದರಡಿ ಒಂದು ಲಕ್ಷ ಯುವಕರಿಗೆ ಕೌಶಲ ತರಬೇತಿ ನೀಡಲು ಉದ್ದೇಶಿಸಿದೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ ಅತ್ಯಧಿಕ ಕೃತಕ ಬುದ್ಧಿಮತ್ತೆಯ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಹೇಳಿಮಾಡಿಸಿದ ತಾಣವಾಗಿದೆ. ಎನ್ಐಪಿಯುಎನ್ಎ ಕರ್ನಾಟಕದಡಿ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವ ಕಾರ್ಮಿಕ ಪಡೆಯನ್ನು ತಯಾರು ಮಾಡಲು ಸರಕಾರ ಕೈಗೊಂಡ ಯೋಜನೆಗಳು ಇನ್ನಷ್ಟು ಬಲಪಡಿಸಲಿವೆ. ಈಗಷ್ಟೇ ಐದು ಕಂಪೆನಿಗಳೊಂದಿಗೆ ಒಡಂಬಡಿಕೆಯನ್ನೂ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಯೋಜನೆ ಲಾಂಛನ ಮತ್ತು ತರಬೇತಿ ನೀಡಲು ಇಚ್ಛಿಸುವ ಕಂಪೆನಿಗಳು ಹಾಗೂ ತರಬೇತಿ ಪಡೆಯಲಿರುವ ಅಭ್ಯರ್ಥಿಗಳ ಮಾರ್ಗಸೂಚಿಗಳನ್ನೂ ಇದೇ ವೇಳೆ ಬಿಡುಗಡೆ ಮಾಡಲಾಯಿತು.