Advertisement

Karnataka: ಗ್ಯಾರಂಟಿ ನಿಲ್ಲವು: ಸಿಎಂ ಸ್ಪಷ್ಟನೆ

02:31 AM Feb 01, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಲಭಿಸದಿದ್ದರೆ ಗ್ಯಾರಂಟಿ ರದ್ದು ಮಾಡಲಾಗುವುದು ಎಂದು ಮಾಗಡಿ ಶಾಸಕ ಬಾಲಕೃಷ್ಣ ನೀಡಿರುವ ಹೇಳಿಕೆ ಈಗ ವಿಪಕ್ಷಗಳಿಗೆ ಆಹಾರವಾಗಿದೆ. ಕಾಂಗ್ರೆಸ್‌ ಸರಕಾರ ಮತದಾರರನ್ನು ಬ್ಲ್ಯಾಕ್‌ವೆುàಲ್‌ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಈ ನಡುವೆ, “ಯಾವುದೇ ಕಾರಣಕ್ಕೂ ಗ್ಯಾರಂಟಿ ರದ್ದು ಮಾಡುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Advertisement

ಸುದ್ದಿಗಾರರ ಜತೆಗೆ ಮಾತನಾಡಿದ ಸಿಎಂ, ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿವೆ. ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆರಂಭದಲ್ಲಿ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರೂ ವಾಪಸ್‌ ಬಂದು ಹೇಳಿಕೆ ನೀಡುವ ಮೂಲಕ “ಹಾನಿ ನಿಯಂತ್ರಣ”ದ ಪ್ರಯತ್ನ ನಡೆಸಿದ್ದಾರೆ.

ಡಿಸಿಎಂ ಡಿಕೆಶಿ ಮಾತನಾಡಿ, ಶಾಸಕ ಬಾಲಕೃಷ್ಣ ಗ್ಯಾರಂಟಿ ನಿಲ್ಲಿಸುವ ಅರ್ಥದಲ್ಲಿ ಹೇಳಿಕೆ ಕೊಟ್ಟಿಲ್ಲ. ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ನಿಲ್ಲಿಸ ಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬ್ಲಾಕ್‌ವೆುಲ್‌ ಯತ್ನ : ಬಿಜೆಪಿ
ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ ಕನ್ನಡಿಗರನ್ನು ಕಾಂಗ್ರೆಸ್‌ ಸರಕಾರ ಅವಮಾನಿಸುತ್ತಿದೆ. ಸ್ವಾಭಿಮಾನಿ ಕನ್ನಡಿಗರು ನಿಮ್ಮ ನಕಲಿ ಗ್ಯಾರಂಟಿಗಳಿಗೆ ಎಂದೂ ಕೈಚಾಚಿಲ್ಲ, ಮುಂದೆಯೂ ಚಾಚುವುದಿಲ್ಲ. ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸುವ ತಾಕತ್ತು ಕಾಂಗ್ರೆಸ್‌ ಸರಕಾರಕ್ಕಿಲ್ಲ. ಆಡಳಿತ ವಿರೋಧಿ ಅಲೆಯಲ್ಲಿ ಮುಳುಗುತ್ತಿರುವ ಕಾಂಗ್ರೆಸ್‌ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಟ್ಟು ಕರಕಲಾಗುವ ಕಾರಣ ಈಗ ಕನ್ನಡಿಗರನ್ನು ಬ್ಲಾಕ್‌ವೆುàಲ್‌ ಮಾಡುತ್ತಿದೆ ಎಂದು ಬಿಜೆಪಿ ತನ್ನ ಅಧಿಕೃತ ಜಾಲತಾಣದಲ್ಲಿ ಬರೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next