Advertisement
ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿ ಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾ ರೋಹಣ ನೆರವೇರಿಸಿ ಅವರು ಮಾತನಾಡಿದರು.ಕನ್ನಡಕ್ಕೆ 2 ಸಾವಿರ ವರ್ಷಗಳ ಇತಿಹಾಸವಿದ್ದು, ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ. ಇಂಥ ಭಾಷೆಯನ್ನು ಬಲಿಗೊಡುವಷ್ಟು ಉದಾರಿಗಳು ನಾವಾಗಬಾರದು. ಅತಿಯಾದ ಭಾಷಾ ವ್ಯಾಮೋಹ ಸರಿಯಲ್ಲ. ಆದರೆ ಕನ್ನಡಾಭಿಮಾನವನ್ನು ಎಂದಿಗೂ ಬಿಟ್ಟುಕೊಡಬಾರದು.
Related Articles
Advertisement
50ನೇ ಸುವರ್ಣ ಸಂಭ್ರಮ ಬಿಜೆಪಿಗಿಲ್ಲಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ. 1953ರಲ್ಲಿ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ ವಿಂಗಡನ ಆಯೋಗ ರಚನೆಯಾಯಿತು. ಆಯೋಗದ ವರದಿಯನ್ನು ಆಧರಿಸಿ ಭಾಷಾವಾರು ರಾಜ್ಯಗಳು ರಚನೆಯಾದವು. 1956ರ ನ. 1ರಂದು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. 1973ರ ನ. 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ಅವಧಿಯಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಮರುನಾಮ ಕರಣಗೊಂಡು 50 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಅಂದಿನ ಬಿಜೆಪಿ ಸರಕಾರ ಸಂಭ್ರಮಿಸಲಿಲ್ಲ. ಆದರೆ 2023ರ ನನ್ನ ಅವಧಿಯಲ್ಲಿ “ಕರ್ನಾಟಕ ಸಂಭ್ರಮ’ ಹೆಸರಿನಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು. ಅಪೌಷ್ಟಿಕತೆ ನಿವಾರಣೆಗೆ ಸರಕಾರ ಒತ್ತು
ರಾಜ್ಯದಲ್ಲಿ ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷ ಒದಗಿಸಬೇಕು ಎಂಬ ಉದ್ದೇಶದಿಂದ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ. ಮಕ್ಕಳಿಗೆ ಹಾಲಿನ ಜತೆಗೆ ಸಾಯಿ ಅನ್ನಪೂರ್ಣ ಅವರ ಸಹಯೋಗದೊಂದಿಗೆ ರಾಗಿ ಮಾಲ್ಟ್ ನೀಡಲಾಗುತ್ತಿದೆ ಎಂದರು. ಸಿಎಂ ಗುಡುಗಿದ್ದೇಕೆ ?
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಕನ್ನಡದ ಮೇಲಿನ ಅವಹೇಳನ
ಬೆಂಗಳೂರಿನಿಂದ ಉತ್ತರ ಭಾರತೀಯರು ಹೋದರೆ ಬೆಂಗಳೂರು ಖಾಲಿಯಾಗುತ್ತದೆ, ಪಿಜಿಗಳು ಖಾಲಿಯಾಗಿ ನೀವು ಹಣ ಗಳಿಸುವು ದಿಲ್ಲ ಎಂಬ ಉದ್ಧಟತನದ ಹೇಳಿಕೆ ನೀಡಿದ್ದ ಸುಗಂಧಾ ಶರ್ಮಾ
ಇಂಥ ಹೇಳಿಕೆಗಳ ವಿರುದ್ಧ ಕನ್ನಡಿಗರು, ಕನ್ನಡಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ, ಪ್ರತಿಭಟನೆ
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕನ್ನಡ ವನ್ನು ಹೀಯಾಳಿಸುವವರ ವಿರುದ್ಧ ಕಠಿನ ಕ್ರಮದ ಎಚ್ಚರಿಕೆ ರವಾನೆ