Advertisement

ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಪಟೇಲ್ ರಾಜೀನಾಮೆ, ವಕೀಲರ ಪ್ರತಿಭಟನೆ

04:32 PM Sep 26, 2017 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರು ಮಂಗಳವಾರ ಮಧ್ಯಾಹ್ನ ದಿಢೀರ್ ರಾಜೀನಾಮೆ ನೀಡಿದ್ದಾರೆ. ಮತ್ತೊಂದೆಡೆ ಪಟೇಲ್ ಅವರ ರಾಜೀನಾಮೆ ಖಂಡಿಸಿ ಬೆಂಗಳೂರು ವಕೀಲರ ಸಂಘದಿಂದ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

Advertisement

ಮುಖ್ಯ ನ್ಯಾಯಮೂರ್ತಿ ಎಸ್ ಕೆ ಮುಖರ್ಜಿಯವರ ಬಳಿಕ ಎರಡನೇ ಸ್ಥಾನದಲ್ಲಿದ್ದ ಜಯಂತ್ ಪಟೇಲ್ ಅವರು ಅಕ್ಟೋಬರ್ 9ರಂದು ನಿವೃತ್ತಿಯಾಗಬೇಕಿತ್ತು. ದೇಶದ ಹೈಕೋರ್ಟ್ ಗಳ ನ್ಯಾಯಮೂರ್ತಿಗಳಲ್ಲೇ ಹಿರಿಯರಾದ ಜಯಂತ್ ಪಟೇಲ್ ರನ್ನು ಅಲಹಾಬಾದ್ ಹೈಕೋರ್ಟ್ ನ ಮೂರನೇ ನ್ಯಾಯಾಧೀಶರಾಗಿ ವರ್ಗಾಯಿಸಿರುವುದರಿಂದ ನ್ಯಾ.ಪಟೇಲ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದರಿಂದಾಗಿ  ನ್ಯಾ.ಪಟೇಲ್ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ ಅವರಿಗೆ ಕಳುಹಿಸಿರುವುದಾಗಿ ಮೂಲಗಳು ತಿಳಿಸಿವೆ.

ಕರ್ನಾಟಕ ಹೈಕೋರ್ಟ್ ನಲ್ಲಿ ಜಸ್ಟೀಸ್ ಪಟೇಲ್ ಅವರು ಹಿರಿಯ ನ್ಯಾಯಮೂರ್ತಿಗಳಾಗಿದ್ದಾರೆ. ಗುಜರಾತ್ ಹೈಕೋರ್ಟ್ ನಲ್ಲಿ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ.ಜಯಂತ್ ಅವರು ಸೇವೆ ಸಲ್ಲಿಸಿದ್ದ ಸಂದರ್ಭದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ್ದರು.

ಬಳಿಕ 2016ರ ಫೆಬ್ರುವರಿ 13ರಂದು ಜಸ್ಟೀಸ್ ಜಯಂತ್ ಪಟೇಲ್ ಅವರು ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 1979ರಲ್ಲಿ  ರಾಜ್ ಕೋಟ್ ನ ಜಿಲ್ಲಾ ನ್ಯಾಯಾಲಯದಲ್ಲಿ ಆರಂಭಿಕವಾಗಿ ವಕೀಲಿ ವೃತ್ತಿಯನ್ನು ಆರಂಭಿಸಿದ್ದರು. 1985ರಲ್ಲಿ ಗುಜರಾತ್ ಹೈಕೋರ್ಟ್ ನಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ್ದರು. 2001ರ ಡಿಸೆಂಬರ್ 3ರಂದು ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದ್ದು, 2004ರ ಆಗಸ್ಟ್ 9ರಂದು ಪೂರ್ಣಾವಧಿ ನ್ಯಾಯಾಮೂರ್ತಿಯಾಗಿ ನೇಮಕವಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next