Advertisement

ಕಾಮೆಡ್‌-ಕೆ ಪರೀಕ್ಷೆಗೆ ಹೈಕೋರ್ಟ್‌ ಅಸ್ತು

08:42 AM Aug 15, 2020 | mahesh |

ಬೆಂಗಳೂರು: ಆಗಸ್ಟ್ 19ರಂದು ನಿಗದಿಯಾಗಿರುವ ಪ್ರಸಕ್ತ ಶೈಕ್ಷಣಿಕ ಸಾಲಿನ ಕಾಮೆಡ್‌-ಕೆ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌ ಸುರಕ್ಷ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಸೂಚಿಸಿದೆ.

Advertisement

ವೈದ್ಯಕೀಯ, ದಂತ ವೈದ್ಯಕೀಯ, ಎಂಜನಿಯರಿಂಗ್‌ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ಕಾಮೆಡ್‌-ಕೆ ಪರೀಕ್ಷೆಗಳನ್ನು ಮುಂದೂಡುವಂತೆ ವಕೀಲ ಅಬ್ದುಲ್‌ ಮನ್ನಾನ್‌ ಖಾನ್‌ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪರೀಕ್ಷೆ ಮುಂದೂಡಿದರೆ ವಿದ್ಯಾರ್ಥಿ ಗಳಿಗೆ ನಷ್ಟವಾಗಲಿದೆ. ಈಗಗಾಲೇ ಸಿಇಟಿ ಪರೀಕ್ಷೆ ನಡೆದಿರುವುದರಿಂದ ಕಾಮೆಡ್‌-ಕೆ ಪರೀಕ್ಷೆಯೂ ನಡೆಯುವ ಅಗತ್ಯವಿದೆ. ಸರಕಾರ ಎಸೆಸೆಲ್ಸಿ, ಸಿಇಟಿ ಪರೀಕ್ಷೆಯನ್ನು ನಡೆಸಿರುವುದರಿಂದ ಕಾಮೆಡ್‌-ಕೆ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಒಟ್ಟು 20 ಸಾವಿರ ಸೀಟುಗಳಿಗೆ 342 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕಾಮೆಡ್‌-ಕೆ ಪರೀಕ್ಷೆ ಬರೆಯಲಿದ್ದಾರೆ. ಇದೇ ಆ. 19ರಂದು ಪರೀಕ್ಷೆ ನಿಗದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next