Advertisement

IMA scam; ಐಪಿಎಸ್ ಅಧಿಕಾರಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

04:47 PM Aug 02, 2023 | Team Udayavani |

ಬೆಂಗಳೂರು: ಐಎಂಎ(I-Monetary Advisory ) ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

Advertisement

ಪೂರ್ವ ಬೆಂಗಳೂರು ಮಾಜಿ ಉಪ ಪೊಲೀಸ್ ಆಯುಕ್ತರಾಗಿದ್ದ ಹಿಲೋರಿ, IMA ನಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಮತ್ತು ಸ್ವೀಕರಿಸಿದ್ದರು ಎಂದು ಆರೋಪಿಸಲಾಗಿತ್ತು. 2020ರ ಫೆಬ್ರವರಿ 1 ರಂದು ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಅದರಲ್ಲಿ ಅವರನ್ನು ಆರೋಪಿ ಸಂಖ್ಯೆ 2 ಎಂದು ಹೆಸರಿಸಲಾಯಿತು. ವಿಚಾರಣಾ ನ್ಯಾಯಾಲಯಕ್ಕೆ ಸಿಬಿಐ ಸಲ್ಲಿಸಿದ್ದ ಪೂರಕ ಆರೋಪಪಟ್ಟಿಯಲ್ಲಿ ಅವರನ್ನು ಆರೋಪಿ ಸಂಖ್ಯೆ 26 ಎಂದು ಹೆಸರಿಸಲಾಗಿತ್ತು.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ತಮ್ಮ ತೀರ್ಪಿನಲ್ಲಿ“ಇಲಾಖಾ ವಿಚಾರಣೆಯಲ್ಲಿ, ಪೂರ್ಣ ಪ್ರಮಾಣದ ವಿಚಾರಣೆಯ ನಂತರ, ವಿಚಾರಣಾ ಅಧಿಕಾರಿಯು ಅರ್ಜಿದಾರರನ್ನು IMA ಠೇವಣಿಗಳಿಗೆ ಸಂಬಂಧಿಸಿದ ಯಾವುದೇ ಲಂಚದ ಬೇಡಿಕೆ ಮತ್ತು ಸ್ವೀಕಾರದ ಅಪರಾಧಗಳಿಂದ ದೋಷಮುಕ್ತಗೊಳಿಸಿದ್ದಾರೆ. ಆದ್ದರಿಂದ, ಅರ್ಜಿದಾರರು ಇಲಾಖಾ ವಿಚಾರಣೆಯಲ್ಲಿ ಸಂಪೂರ್ಣವಾಗಿ ದೋಷಮುಕ್ತರಾಗಿರುವ ಕಾರಣ ಪ್ರಸ್ತುತ ಹಂತದವರೆಗೆ ಸಮಸ್ಯೆಯ ಮೂಲವನ್ನು ರದ್ದುಗೊಳಿಸುವಂತೆ ಕೋರಿ ಈ ನ್ಯಾಯಾಲಯದ ಮುಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next