Advertisement
ಅರ್ಜಿಯ ವಿಚಾರಣೆ ವೇಳೆ ಉಡುಪಿ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಪರ ವಾದ ಮಂಡಿಸಿದ್ದ ಹಿರಿಯ ನ್ಯಾಯವಾದಿ ಎಸ್.ಎಸ್ ನಾಗಾನಂದ, “ಉಡುಪಿ ಕೃಷ್ಣ ಮಠದ ಸುತ್ತ ಹಲವು ಮುಸ್ಲಿಂ ಕುಟುಂಬಗಳಿವೆ. ರಥೋತ್ಸವದ ವೇಳೆ ಅವರೂ ಪಾಲ್ಗೊಳ್ಳುತ್ತಾರೆ. ಇಂತಹ ಸಾಮರಸ್ಯ ವಾತಾವರಣ ಹಾಳು ಮಾಡಲಾಗುತ್ತಿದೆ. ಎಲ್ಲರೂ ಅಣ್ಣತಮ್ಮಂದಿರಂತೆ ಬಾಳಬೇಕು’ ಎಂದು ವಾದ ಮಂಡಿಸಿದ್ದರು.
Related Articles
Advertisement
ಗಲಾಟೆಗೆ ಸಿಎಫ್ಐ ಕಾರಣ: ಕಾಲೇಜುಅರ್ಜಿ ಕುರಿತು ಫೆ.23ರಂದು ನಡೆದಿದ್ದ ವಿಚಾರಣೆ ವೇಳೆ ಉಡುಪಿ ಕಾಲೇಜಿನ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಎಸ್.ಎಸ್.ನಾಗಾನಂದ್, 2004ರಿಂದಲೂ ಕಾಲೇಜಿನಲ್ಲಿ ಸಮವಸ್ತ್ರ ಸಂಹಿತೆ ಜಾರಿಯಲ್ಲಿದೆ. ಆದರೆ, ಇಷ್ಟು ವರ್ಷಗಳ ಬಳಿಕ ಏಕಾಏಕಿ ಸಮಸ್ಯೆ ಉದ್ಭವಿಸಿದೆ. 2021ರ ಡಿ.30ರಂದು ಸಿಎಫ್‌ಐ ಎಂಬ ಸಂಘಟನೆ ಕಾಲೇಜು ಅಧಿಕಾರಿಗಳನ್ನು ಭೇಟಿ ಮಾಡಿ, ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸಿತ್ತು. ಇದಕ್ಕೆ ನಿರಾಕರಿಸಿದಾಗ ಇಷ್ಟೆಲ್ಲ ಗದ್ದಲಗಳು ಸೃಷ್ಟಿಯಾಗಿವೆ. ಸಿಎಫ್‌ಐ ಸಂಘಟನೆ ಶಿಕ್ಷಕರಿಗೂ ಬೆದರಿಕೆ ಹಾಕಿದೆ. “ಸಿಎಫ್‌ಐ ನಂತಹ ಸಂಘಟನೆಗಳು ಸಮಾಜವನ್ನು ಬೆದರಿಸಬಾರದು. ಉಡುಪಿ ಕೃಷ್ಣ ಮಠದ ಸುತ್ತ ಹಲವು ಮುಸ್ಲಿಂ ಕುಟುಂಬಗಳಿವೆ. ರಥೋತ್ಸವದ ವೇಳೆ ಅವರೂ ಪಾಲ್ಗೊಳ್ಳುತ್ತಾರೆ. ಇಂತಹ ಸಾಮರಸ್ಯ ವಾತಾವರಣ ಹಾಳು ಮಾಡಲಾಗುತ್ತಿದೆ. ಎಂದು ಕೋರ್ಟ್ ಗಮನಕ್ಕೆ ತಂದಿದ್ದರು. ಅದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ಸಂಘಟನೆಯ ಬಗ್ಗೆ ಸರ್ಕಾರದಿಂದ ಮಾಹಿತಿ ಕೇಳಿತ್ತು. ಮರುದಿನ ಅರ್ಜಿ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಉಡುಪಿಯ ಕಾಲೇಜಿನ ಶಿಕ್ಷಕರು ಹಿಜಾಬ್‌ಗ ಅನುಮತಿ ನೀಡದ್ದಕ್ಕೆ ಕೆಲ ಸಂಘಟನೆಗಳು ಬೆದರಿಕೆ ಹಾಕಿದ ಬಗ್ಗೆ ನೀಡಲಾಗಿದ್ದ ದೂರಿನ ಮೇರೆಗೆ ಒಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿ, ಎಫ್‌ಐಆರ್‌ಗೆ ಸಂಬಂಧಿಸಿದ ದಾಖಲೆಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದ್ದರು.