Advertisement

Karnataka: ಭಾರಿ ಮಳೆ ಮುನ್ಸೂಚನೆ, ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

02:40 PM Jun 22, 2024 | Team Udayavani |

ಬೆಂಗಳೂರು: ಮುಂಗಾರು ಚುರುಕುಗೊಂಡ ಬೆನ್ನಲ್ಲೇ  ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ. 23ರಿಂದ ಭಾರಿ ಮಳೆಯಾಗಲಿದೆ. ಹೀಗಾಗಿ ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Advertisement

ಈ ವೇಳೆ ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಜೂ.24ರಂದು ಭಾರಿ ಮಳೆ  ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಸೇರಿದಂತೆ ಉತ್ತರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌:

ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಪೈಕಿ  ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು,  ಇದು ಜೂನ್ 25ರ ವರೆಗೆ ಭಾರಿ ಮಳೆ ಮುಂದುವರಿಯಲಿದೆ.  ಕರಾವಳಿಯಲ್ಲಿ ಜೂ.22ರಂದು ಆರೆಂಜ್‌ ಹಾಗೂ ಜೂ.23 ಮತ್ತು 24ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಪೈಕಿ ಬೆಂಗಳೂರಿನ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಂತರಗಳಲ್ಲೂ ಭಾರಿ ಮಳೆ ಸಾಧ್ಯತೆಯ ಹವಾಮಾನ ಇಲಾಖೆ ಹೇಳಿದೆ. ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ, ಕೆಲೆವೆಡೆ ಸಾಧಾರಣ ಮಳೆಯಾಗಿದೆ. ಆದರೆ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದಿದೆ.

Advertisement

ಈ ಬಾರಿ ಮುಂಗಾರು ಪ್ರವೇಶ ಕೊಂಚ ಬೇಗವಾಗಿದ್ದರೂ ಜೂನ್ ತಿಂಗಳಲ್ಲಿ ಮಳೆ ಕೊರತೆ ಕಾಡಲಿದೆ ಎಂದು ಇಲಾಖೆ ಸೂಚಿಸಿದೆ. ದೇಶದಲ್ಲಿ ಸರಾಸರಿ ಮಳೆ ಪ್ರಮಾಣದಲ್ಲಿ ಶೇಕಡಾ 20 ರಷ್ಟು ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂ.1ರಿಂದ 18ರೊಳಗೆ 64.5 ಮಿ.ಮೀ ಮಳೆಯಾಗುವ ಮೂಲಕ ಶೇ.20ರಷ್ಟು ಕೊರತೆಯಾಗಿದೆ. ಉತ್ತರ ಭಾರತದ ಹಲವೆಡೆ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಆದರೆ ದಕ್ಷಿಣ ಭಾರತದಲ್ಲಿ 106.6 ಮಿ.ಮೀ ಮಳೆಯಾಗುವ ಮೂಲಕ ಶೇ.16ರಷ್ಟು ಅಧಿಕ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next