Advertisement
ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಗೊಳಿಸದ ಬಿಬಿಎಂಪಿ ಕ್ರಮಕ್ಕೆ ಅಸಮಾಧಾನ ವ್ಯಕ್ತ ಪಡಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿದಾಖಲಿಸಿಕೊಂಡು ತೆರವು ಕಾರ್ಯ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
Related Articles
Advertisement
ಅಲ್ಲದೆ, ಕೆಲವು ಮಂದಿ ಪಾದಚಾರಿ ಮಾರ್ಗದಲ್ಲಿ ವಾಹನಗಳ ನಿಲುಗಡೆಯನ್ನಾಗಿ ಮಾಡಿಕೊಳ್ಳಲಾಗಿದೆ. ತಕ್ಷಣ ಎಲ್ಲ ಪಾದಚಾರಿ ಮಾರ್ಗಗಳನ್ನು ತೆರವು ಮಾಡಬೇಕು. ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆ ಯನ್ನು ಫೆಬ್ರುವರಿ 1ಕ್ಕೆ ಮುಂದೂಡಿತು.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿಯೊಂದಿಗೆ ಇತರೆ ಯಾವ ಇಲಾಖೆಗಳು ಭಾಗಿಯಾಗಬಹುದು. ಅವರಿಗೆ ಯಾವ ರೀತಿಯಲ್ಲಿ ನಿರ್ದೇಶನ ನೀಡ ಬಹುದು ಎಂಬುದರ ಕುರಿತು ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿತು. ಅಲ್ಲದೆ, ಪ್ರಕರಣ ಸಂಬಂಧ ವಿವರಣೆ ನೀಡುವುದಕ್ಕಾಗಿ ಮುಂದಿನ ವಿಚಾರಣೆ ವೇಳೆ ಪಾಲಿಕೆ ಮುಖ್ಯ ಆಯುಕ್ತರು ಖುದ್ದು ಹಾಜರಿರಬೇಕು ಎಂದು ನ್ಯಾಯಪೀಠ ಹೇಳಿತು. ಆದರೆ, ಅಡ್ವೋಕೇಟ್ ಜನರಲ್ ಸರ್ಕಾರದ ಎಲ್ಲಾ ಇಲಾಖೆಗಳನ್ನು ಪ್ರತಿನಿಧಿಸುತ್ತಾರೆ, ಅವರೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಮಗೆ ಅಧಿಕಾರಿಗಳನ್ನು ಕೋರ್ಟ್‌ಗೆ ಕರೆಸುವ ಖಯಾಲಿ ಇಲ್ಲ ಎಂದು ಹೇಳಿ ಬಿಬಿಎಂಪಿ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವುದು ಎಂದು ಬೇಡ ಎಂದಿತು.
ಪ್ರಕರಣದ ಹಿನ್ನೆಲೆ ಏನು?: ಪಾದಚಾರಿ ಮಾರ್ಗ ದಲ್ಲಿದ್ದ ಬಿಡಾಡಿ ದನಗಳ ದಾಳಿಯಿಂದ ಅರ್ಜಿದಾರರ ತಾಯಿಗೆ ಪೆಟ್ಟಾಗಿದೆ. ಪಾದಚಾರಿ ಮಾರ್ಗವನ್ನು ಒತ್ತುವರಿದಾರರಿಂದ ತೆರವುಗೊಳಿಸಿದ ಬಳಿಕ ಅದಕ್ಕೆ ಕಬ್ಬಿಣದ ತಡೆಗೋಡೆ ಹಾಕಿ ಸಂರಕ್ಷಣೆ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು. ಅಲ್ಲದೆ, ಅರ್ಜಿ ದಾರರ ಮನೆ ಬಳಿಯ ಪಾದಚಾರಿ ಮಾರ್ಗಗಳ ಒತ್ತು ವರಿ ಸಂಬಂಧಿಸಿದ ಫೋಟೋಗಳೊಂದಿಗೆ ಪಾಲಿಕೆಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾ ಗಿಲ್ಲ. ಜತೆಗೆ, ವಾಹನ ನಿಲುಗಡೆಗೆ ಇರುವ ಸ್ಥಳದಲ್ಲಿ ವಾಣಿಜ್ಯ ವ್ಯವಹಾರಕ್ಕಾಗಿ ಅಧಿಕಾರಿಗಳು ಅನುಮತಿ ನೀಡಲಾಗಿದೆಂದು ಅರ್ಜಿಯಲ್ಲಿ ಆರೋಪಿಸಿದ್ದರು.