Advertisement

ಸ್ಥಳೀಯ ಸಂಸ್ಥೆಗಳಿಗೆ ‘ಹೈ’ಶಾಕ್! ಇತ್ತೀಚೆಗೆ ಅಧ್ಯಕ್ಷ- ಉಪಾಧ್ಯಕ್ಷರಾದವರ ಮುಂದಿನ ದಾರಿಯೇನು?

06:07 PM Nov 19, 2020 | keerthan |

ಮಣಿಪಾಲ: ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಆದೇಶವನ್ನು ಗುರುವಾರ ಹೈಕೋರ್ಟ್ ರದ್ದುಗೊಳಿಸಿದೆ. ಈ ಆದೇಶದಿಂದ ಇತ್ತೀಚೆಗಷ್ಟೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದವರಿಗೆ ಆತಂಕ ಆರಂಭವಾಗಿದೆ.

Advertisement

ಅಕ್ಟೋಬರ್ 8ರಂದು ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಬಹಳಷ್ಟು ಕಡೆ ಚುನಾವಣೆ ನಡೆದು ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಈ ಆದೇಶದಿಂದ ಈ ಚುನಾವಣಾ ಫಲಿತಾಂಶಗಳು ಅಮಾನತು ಸ್ಥಿತಿಯಲ್ಲಿರುತ್ತದೆ. ಅಂದರೆ ಅಧ್ಯಕ್ಷ ಉಪಾಧ್ಯಕ್ಷರು ಯಾವುದೇ ಅಧಿಕಾರ ನಡೆಸುವಂತಿಲ್ಲ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 11 ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಮೂರು ಪುರಸಭೆ, ಮೂರು ಪುರಸಭೆ ಮತ್ತು ನಾಲ್ಕು ಪಟ್ಟಣ ಪಂಚಾಯತ್ ಗಳಿಗೆ ಚುನಾವಣೆ ನಡೆದು, ಫಲಿತಾಂಶ ಪ್ರಕಟವಾಗಿದೆ.

ಇದನ್ನೂ ಓದಿ:ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್

ಸದ್ಯ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲವಕಾಶ ನೀಡಲಾಗಿದೆ. ಮೇಲ್ಮನವಿ ಸಲ್ಲಿಸಿದಲ್ಲಿ ಹೈಕೋರ್ಟ್ ನ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಲಿದ್ದು, ಅದು ನೀಡುವ ತೀರ್ಪು ಅಂತಿಮವಾಗಿರಲಿದೆ.

Advertisement

ಕರಾವಳಿಯಲ್ಲಿ ಚುನಾವಣೆ ನಡೆದ ಸ್ಥಳೀಯ ಸಂಸ್ಥೆಗಳು

ನಗರ ಸಭೆಗಳು

ಉಳ್ಳಾಲ

ಪುತ್ತೂರು

ಉಡುಪಿ

ಪುರಸಭೆಗಳು

ಬಂಟ್ವಾಳ

ಕಾರ್ಕಳ

ಕುಂದಾಪುರ

ಪಟ್ಟಣ ಪಂಚಾಯತಿಗಳು

ಸಾಲಿಗ್ರಾಮ

ಮೂಲ್ಕಿ

ಬೆಳ್ತಂಗಡಿ

ಸುಳ್ಯ

Advertisement

Udayavani is now on Telegram. Click here to join our channel and stay updated with the latest news.

Next