Advertisement

ಧರ್ಮ-ಸಂಸ್ಕೃತಿ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು: ಹೈಕೋರ್ಟ್

12:44 PM Feb 11, 2022 | Team Udayavani |

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ವಿಚಾರದ ಕುರಿತಾಗಿ ಗುರುವಾರ ವಿಚಾರಣೆ ನಡೆಸಿ ಮೌಖಿಕ ಸೂಚನೆ ನೀಡಿದ್ದ ಹೈಕೋರ್ಟ್‌ ಪೂರ್ಣಪೀಠ ಇಂದು ಮಧ್ಯಂತರ ಆದೇಶ ನೀಡಿದೆ.

Advertisement

ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಶಿಕ್ಷಣ ಸಂಸ್ಥೆಗಳ ಬಂದ್ ನೋವಿನ ಸಂಗತಿ. ನಮ್ಮದು ಬಹು ಸಂಸ್ಕೃತಿ, ಧರ್ಮ ಹಾಗೂ ಭಾಷೆ ಹೊಂದಿರುವ ರಾಷ್ಟ್ರ. ಪ್ರತಿಯೊಬ್ಬ ನಾಗರಿಕನಿಗೂ ಅವನ ಇಚ್ಛೆಯ ಧರ್ಮ ಆಚರಿಸುವ ಹಕ್ಕಿದೆ. ಆದರೆ ಈ ಹಕ್ಕು ಪರಿಪೂರ್ಣವಲ್ಲ, ಅದಕ್ಕೂ ಕೆಲ ನಿರ್ಬಂಧಗಳಿವೆ ಎಂದು ಹೈಕೋರ್ಟ್ ಹೇಳಿದೆ.

ತರಗತಿಗಳಲ್ಲಿ ಹಿಜಾಬ್ ಧರಿಸುವುದು ಇಸ್ಲಾಂ ನ ಅಗತ್ಯ ಧಾರ್ಮಿಕ ಆಚರಣೆಯೇ? ಇದು ಸಂವಿಧಾನದ ವ್ಯಾಪ್ತಿಯಲ್ಲಿ ಬರುವುದೇ? ಈ ಬಗ್ಗೆ ಆಳವಾಗಿ ಪರಿಶೀಲನೆ ನಡೆಸಬೇಕಿದೆ. ಈ ನಾಗರಿಕ ಸಮಾಜದಲ್ಲಿ ಧರ್ಮ, ಸಂಸ್ಕೃತಿ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು. ಈ ವಿಚಾರಗಳಿಂದ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿರುವುದು ಖುಷಿಯ ವಿಚಾರವಲ್ಲ. ಈ ಪ್ರಕರಣವನ್ನು ತುರ್ತಾಗಿ ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಉಚ್ಛ ನ್ಯಾಯಾಲಯ ಸೂಚಿಸಿದೆ.

ಇದನ್ನೂ ಓದಿ:ಮಧ್ಯಂತರ ಆದೇಶದ ತುರ್ತು ವಿಚಾರಣೆಗೆ ಸುಪ್ರೀಂ ನಕಾರ; ರಾಷ್ಟ್ರೀಯ ವಿಚಾರ ಮಾಡಬೇಡಿ ಎಂದು ಸೂಚನೆ

ಪ್ರತಿಭಟನೆ ಕಾರಣದಿಂದ ಶಾಲಾ-ಕಾಲೇಜುಗಳು ಬಂದ್ ಆಗಬಾರದು. ಪ್ರಸಕ್ತ ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಹಂತಕ್ಕೆ ಬಂದಿದ್ದು, ಮತ್ತೆ ಶೈಕ್ಷಣಿಕ ವರ್ಷ ವಿಳಂಬವಾದರೆ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕು. ಶಿಕ್ಷಣ ಸಂಸ್ಥೆಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಅವಕಾಶ ಕೊಡಿ. ಸರ್ಕಾರ ಹಾಗೂ ಸಂಬಂಧಪಟ್ಟವರಿಗೆ ನಾವು ಮನವಿ ಮಾಡುತ್ತಿದ್ದೇವೆ ಎಂದು ಸೂಚಿಸಿದೆ.

Advertisement

ಅರ್ಜಿ ನ್ಯಾಯಾಲಯದಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಧರ್ಮಾನುಸಾರ ಕೇಸರಿ ಶಾಲು, ಸ್ಕಾರ್ಫ್, ಹಿಜಾಬ್, ಧಾರ್ಮಿಕ ಬಾವುಟಗಳನ್ನು ನಿರ್ಬಂಧಿಸಲಾಗುತ್ತಿದೆ. ಇದ್ಯಾವುದನ್ನೂ ತರಗತಿಯೊಳಗೆ ತರದಂತೆ ವಿದ್ಯಾರ್ಥಿಗಳನ್ನು ನಿರ್ಬಂಧಿಸಲಾಗುತ್ತಿದೆ ಎಂದು ಮಧ್ಯಂತರ ಆದೇಶದಲ್ಲಿ ತಿಳಿಸಿರುವ ಹೈಕೋರ್ಟ್ ಮಧ್ಯಂತರ ಆಧೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಹಿಂದುತ್ವ ಗುಂಪುಗಳು ಮುಸ್ಲಿಂ ಹುಡುಗಿಯರಿಗೆ ಕಿರುಕುಳ ನೀಡುತ್ತಿದೆ: ಫುಟ್ ಬಾಲ್ ತಾರೆ ಪೋಗ್ಬಾ

Advertisement

Udayavani is now on Telegram. Click here to join our channel and stay updated with the latest news.

Next