Advertisement

ನ್ಯಾಯಾಲಯದ ಆದೇಶಗಳ ಪಾಲನೆಗೆ ವಿಳಂಬ: ಹೈಕೋರ್ಟ್‌ ಆಕ್ರೋಶ

11:35 PM Jun 06, 2022 | Team Udayavani |

ಬೆಂಗಳೂರು: ನ್ಯಾಯಾಲಯದ ಆದೇಶಗಳನ್ನು ಅಸಡ್ಡೆಯಿಂದ ಕಾಣುವ ಸರಕಾರ ಮತ್ತು ಅಧಿಕಾರಿಗಳ ವರ್ತನೆಯಿಂದ ಸಾಕಾಗಿ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಇದು ಸೂಕ್ತ ಕಾಲ ಎಂದು ಕಟುವಾಗಿ ಹೇಳಿದೆ.

Advertisement

ರಾಜ್ಯದ ವಿವಿಧ ಪೌರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್‌-ಸಿ ಸಿಬಂದಿಯನ್ನು ಗ್ರೂಪ್‌-ಬಿಗೆ ವಿಲೀನಗೊಳಿಸಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಈ ನಿಟ್ಟಿನಲ್ಲಿ ಎರಡು ತಿಂಗಳಲ್ಲಿ ಕರಡು ನಿಯಮ ಪ್ರಕಟಿಸಬೇಕು ಎಂದು 2021ರ ಜು.19ರಂದು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು. ಈ ಆದೇಶ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಕರ್ನಾಟಕ ನಗರ ಪಾಲಿಕೆಗಳ ಉದ್ಯೋಗಿಗಳ ಸಂಘ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ಈ ಅರ್ಜಿ ವಿಚಾರಣೆಗೆ ಬಂದಿತ್ತು.

ನ್ಯಾಯಾಲಯದ ನಿರ್ದೇಶನದಂತೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಮತ್ತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್‌. ಅರ್ಚನಾ ವಿಚಾರಣೆಗೆ ಖುದ್ದು ಹಾಜರಾಗಿದ್ದರು. ಈ ವೇಳೆ ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಅವರು, ಕರಡು ನಿಯಮಗಳು ಸಿದ್ಧವಾಗಿದ್ದವು.

ಸಚಿವ ಸಂಪುಟದಿಂದ ಅನುಮೋದನೆ ಪಡೆಯುವುದು ತಡವಾದ ಕಾರಣ ಅಧಿಸೂಚನೆ ಹೊರಡಿಸಲಾಗಲಿಲ್ಲ. ಸದ್ಯ ಕರಡು ನಿಯಮಗಳನ್ನು ಜೂ.3ರಂದು ಪ್ರಕಟಿಸಿದ್ದು, ಸಾರ್ವ ಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ ಎಂದು ಸಮಜಾಯಿಷಿ ನೀಡಿದರು.

ಇದಕ್ಕೆ ಕೋಪಗೊಂಡ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರು, ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದರು. ಕೊನೆಗೆ ಒಂದು ತಿಂಗಳಲ್ಲಿ ಆದೇಶವನ್ನು ಪಾಲಿಸಲಾಗುವುದು ಎಂದು ಸರಕಾರದ ಪರ ವಕೀಲರು ಭರವಸೆ ನೀಡಿದರು.

Advertisement

ಅದಕ್ಕೆ ಒಪ್ಪಿದ ನ್ಯಾಯಪೀಠ, ಆರು ತಿಂಗಳ ಕಾಲಾ ವಕಾಶ ನೀಡಿ ವಿಚಾರಣೆ ಮುಂದೂಡಿತು. ಮುಂದಿನ ವಿಚಾರಣೆಗೂ ರಾಕೇಶ್‌ ಸಿಂಗ್‌ ಮತ್ತು ಅರ್ಚನಾ ಹಾಜರಾಗಬೇಕು ಎಂದು ಸೂಚಿಸಿತು.

Advertisement

Udayavani is now on Telegram. Click here to join our channel and stay updated with the latest news.

Next