Advertisement

ಪೋಕ್ಸೋ : ಸಂತ್ರಸ್ತೆಗೆ 18 ವರ್ಷ ದಾಟಿದ್ದರೆ ಪಾಟೀ ಸವಾಲಿಗೆ ಒಳಪಡಿಸಬಹುದು: ಹೈಕೋರ್ಟ್‌

12:47 AM Jun 12, 2022 | Team Udayavani |

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತೆಯ ವಯಸ್ಸು 18 ವರ್ಷ ತುಂಬಿದ್ದರೆ ಅವರನ್ನು ಮತ್ತೆ ಪಾಟೀ ಸವಾಲಿಗೆ ಒಳಪಡಿಸಲು ಯಾವುದೇ ಅಡ್ಡಿಯಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

Advertisement

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಅಪ್ರಾಪ್ತ ವಯಸ್ಕ ಸಂತ್ರಸ್ತರನ್ನು ಪದೇಪದೆ ಪಾಟೀ ಸವಾಲಿಗೆ ಒಳಪಡಿಸಬಾರದು ಎಂಬ ನಿಯಮವಿದೆಯಾದರೂ, ಸಂತ್ರಸ್ತರಿಗೆ 18 ವರ್ಷ ತುಂಬಿದ್ದರೆ ಈ ನಿಯಮ ಅನ್ವಯಿಸದು ಎಂದು ಹೈಕೋರ್ಟ್‌ ಹೇಳಿದೆ.

ಪೋಕ್ಸೋ ಪ್ರಕರಣವೊಂದರ ಸಂತ್ರಸ್ತೆಯನ್ನು ಸಿಆರ್‌ಪಿಸಿ ಸೆಕ್ಷನ್‌ 311 ಪ್ರಕಾರ ಮರು ವಿಚಾರಣೆಗೆ ಕರೆಸಿಕೊಳ್ಳಬೇಕು ಎಂದು ಆರೋಪಿ ಮಹಮ್ಮದ್‌ ಅಲಿ ಅಕºರ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣ ನ್ಯಾಯಾಲಯ ವಜಾಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್‌ ಮೆಟ್ಟಿಲೇರಿದ್ದ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಿಚಾರಣ ನ್ಯಾಯಾ ಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next