Advertisement

ಕೆಜಿಎಫ್-2 ಹಾಡಿನ ವಿವಾದ: ರಾಹುಲ್‌ಗೆ ಹೈಕೋರ್ಟ್‌ ನೋಟಿಸ್‌

10:09 PM Dec 02, 2022 | Team Udayavani |

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಹಾಗೂ ಭಾರತ್‌ ಜೋಡೋ ಯಾತ್ರೆಯ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಳಸಿಕೊಂಡಿದ್ದ “ಕೆಜಿಎಫ್-2′ ಚಿತ್ರದ ಹಾಡಿನ ತುಣುಕು ಮತ್ತು ಸಂಗೀತವನ್ನು ತೆಗೆದು ಹಾಕುವಂತೆ ನ್ಯಾಯಾಲಯ ನೀಡಿದ್ದ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಹಕ್ಕು ಸ್ವಾಮ್ಯ ಉಲ್ಲಂಘಿಸಿ ಬಳಸಿಕೊಂಡಿದ್ದ ಕೆಜಿಎಫ್-2 ಚಿತ್ರದ ಹಾಡಿನ ಸಂಗೀತವನ್ನು ಕಾಂಗ್ರೆಸ್‌ನ ಎಲ್ಲ ಸಾಮಾಜಿಕ ಜಾಲತಾಣಗಳ ಖಾತೆಯಿಂದ ತೆರವುಗೊಳಿಸುವುದಾಗಿ ಹೈಕೋರ್ಟ್‌ಗೆ ಭರವಸೆ ನೀಡಿದ್ದ ಹೊರತಾಗಿಯೂ ಈವರೆಗೂ ತೆಗೆದುಹಾಕಿಲ್ಲ. ಈ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಿ ಹಾಡುಗಳ ಹಕ್ಕು ಸ್ವಾಮ್ಯ ಹೊಂದಿರುವ ಎಂಆರ್‌ಟಿ ಮ್ಯೂಸಿಕ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಮು| ನ್ಯಾ| ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಆರೋಪಿತರನ್ನಾಗಿ ಮಾಡಲಾಗಿರುವ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್‌ ಹಾಗೂ ಸಾಮಾಜಿಕ ಮತ್ತು ಡಿಜಿಟಲ್‌ ಮಾಧ್ಯಮದ ಮುಖ್ಯಸ್ಥೆ ಸುಪ್ರಿಯಾ ಅವರಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next