Advertisement

Karnataka: ಬಸ್‌ಗಳಲ್ಲಿ ಆಡಿಯೋ ಪ್ರಕಟನೆಗೆ ಹೈಕೋರ್ಟ್‌ ಸೂಚನೆ

12:10 AM Nov 10, 2023 | Team Udayavani |

ಬೆಂಗಳೂರು: ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಬಸ್‌ಗಳಲ್ಲಿ ಆಡಿಯೋ ರೂಪದಲ್ಲಿ ಪ್ರಕಟನೆ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್‌ ಆಪರೇಟರ್‌ಗಳಿಗೆ ನಿರ್ದೇಶನ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿದೆ.

Advertisement

ಬೆಂಗಳೂರಿನ ದೃಷ್ಟಿ ವಿಶೇಷ ಚೇತನ ಎನ್‌. ಶ್ರೇಯಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೋ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್‌ಗಳೂ ಸಂಚಾರ ಕೈಗೊಳ್ಳುತ್ತಿರುವುದರಿಂದ, ಆ ಬಸ್‌ಗಳಲ್ಲಿ ವಿಶೇಷಚೇತನರ ಪ್ರಯಾಣಕ್ಕೆ ಅಗತ್ಯ ನೆರವು ಕಲ್ಪಿಸಬೇಕು ಎಂದು ಕೋರ್ಟ್‌ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next