Advertisement
ಪ್ರಕರಣ ಸಂಬಂಧ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಹಾಗೂ ಆ ಸಂಬಂಧ 5ನೇ ಎಸಿಎಂಎಂ ನ್ಯಾಯಾಲಯದ ಮುಂದಿರುವ ಪ್ರಕರಣ ರದ್ದು ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
Related Articles
ನಗರದಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಶೋಭಾ ಕರಂದ್ಲಾಜೆ ಭಾಷಣ ಮಾಡುತ್ತಾ¤, “ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಬಾಂಬ್ ಸ್ಫೋಟ ಮಾಡ್ತಾರಾ’ ಎಂಬ ಹೇಳಿಕೆ ನೀಡಿದ್ದರು. ಅದನ್ನು ಖಂಡಿಸಿದ್ದ ತಮಿಳುನಾಡು ಸಿಎಂ ಸ್ಟಾಲಿನ್, ಕೇಂದ್ರ ಚುನಾವಣ ಆಯೋಗಕ್ಕೆ ದೂರು ನೀಡಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದರು.
Advertisement
ಈ ಮಧ್ಯೆ, ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿತ್ತು. ಅದರಂತೆ, ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಅದನ್ನು ರದ್ದುಪಡಿಸುವಂತೆ ಶೋಭಾ ಕರಂದ್ಲಾಜೆ ಹೈಕೋರ್ಟ್ ಮೊರೆ ಹೋಗಿದ್ದರು.