Advertisement

ರಾಜ್ಯ ಸರ್ಕಾರದ ಎಸ್ಮಾ ಜಾರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

03:03 PM Oct 07, 2017 | Sharanya Alva |

ಬೆಂಗಳೂರು: ಬಿಎಂಆರ್ ಸಿಎಲ್ ಸಿಬ್ಬಂದಿ ವಿರುದ್ಧ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಬಿಎಂಆರ್ ಸಿಎಲ್ ಎಂಡಿಗೆ ನೋಟಿಸ್ ಜಾರಿ ಮಾಡಿದೆ.

Advertisement

ಜುಲೈ 7ರಂದು ರಾಜ್ಯ ಸರ್ಕಾರ ಬಿಎಂಆರ್ ಸಿಎಲ್ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಿಎಂಆರ್ ಸಿಎಲ್ ನೌಕರರ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿತ್ತು.

2002ರ ಮೆಟ್ರೋ ಕಾಯ್ದೆ ಅನ್ವಯ ರಾಜ್ಯ ಸರ್ಕಾರಕ್ಕೆ ಎಸ್ಮಾ ಜಾರಿಗೊಳಿಸುವ ಅಧಿಕಾರ ಇಲ್ಲ, ಹೀಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಎಸ್ಮಾ ರದ್ದುಗೊಳಿಸುವಂತೆ ಬಿಎಂಆರ್ ಸಿಎಲ್ ನೌಕರರ ಒಕ್ಕೂಟ ವಾದಿಸಿತ್ತು.

ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಎಸ್ಮಾ ಜಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶ ನೀಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next