Advertisement
ಬಾಬಾ ಬುಡನ್‌ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಸ್ಲಿಂ ಮುಜಾವರ್ ನೇಮಕ ಮಾಡಿರುವುದನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಷಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ ತೀರ್ಪನ್ನು ಸೋಮವಾರ ಪ್ರಕಟಿಸಿರುವ ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾ. ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
Related Articles
Advertisement
ವಿವಾದ ಸುಖಾಂತ್ಯಗೊಳ್ಳಬೇಕು: ಹೈಕೋರ್ಟ್ ಆಶಯಎಲ್ಲ ಧರ್ಮ, ಲಿಂಗ, ಜಾತಿ, ಮೇಲು, ಕೀಳುಗಳನ್ನೆಲ್ಲಾ ತೊಡೆದುಹಾಕಿ ಸಮಾಜ ಸಮಾಜ ನಿರ್ಮಾಣವೇ ಸಂವಿಧಾನದ ಹೆಗ್ಗುರುತು ಆಗಿದೆ. ಸಂವಿಧಾನದ ಕಲಂ 25ರಿಂದ 30ನ್ನು ಆದೇಶದಲ್ಲಿ ಉಲ್ಲೇಖಿಸಿರುವ ನ್ಯಾಯಪೀಠ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಬಹಳ ಸೂಕ್ಷ್ಮತೆಯಿಂದ ನಡೆದುಕೊಂಡಿದೆ ಎಂದು ಹೈಕೋರ್ಟ್ ಹೇಳಿದೆ. ಅಲ್ಲದೇ ಕೋರ್ಟ್ ಆದೇಶದ ನಂತರದ ಕ್ರಮಗಳು ಏಕಪಕ್ಷೀಯ, ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಯಾವುದೇ ಸಮಾಜದವರು ಆಕ್ಷೇಪ ಎತ್ತಿಲ್ಲ ಎಂದೂ ನ್ಯಾಯಾಲಯ ಹೇಳಿದೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ತಮ್ಮ ನಡವಳಿಕೆಯಿಂದ ಧಾರ್ಮಿಕ ಸಂಸ್ಥೆಗಳನ್ನು ಪ್ರಜಾಪ್ರಭುತ್ವದ “ಉಜ್ವಲ ಉದಾಹರಣೆ’ಯನ್ನಾಗಿ ಮಾಡಿದ್ದಾರೆ. ಕೋರ್ಟ್ ಸಹ ಧಾರ್ಮಿಕ ಕೇಂದ್ರಗಳ ಸಂಪ್ರದಾಯ ಮತ್ತು ವಿಧಿ ವಿಧಾನಗಳ ಬಗ್ಗೆ ಜಾಗರೂಕವಾಗಿರುತ್ತದೆ. ಹಾಗಾಗಿ ಸಾಮಾನ್ಯವಾಗಿ ನ್ಯಾಯಾಲಯಗಳು ಇಂತಹ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಅದರಲ್ಲೂ ವಿಶೇಷವಾಗಿ ಭಕ್ತಾಧಿಗಳ ನಡುವಿನ ಮೂಲಭೂತ ಹಕ್ಕುಗಳ ವಿಷಯ ವಿಚಾರದಲ್ಲಿ. ಹಾಗಾಗಿ ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ” ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಐದು ದಶಕಗಳ ಹಿಂದೆ ಉಂಟಾಗಿರುವ ವಿವಾದ ಉಭಯ ಧರ್ಮದವರ ನಡುವೆ ಯಾವುದೇ ವಿವಾದಗಳಿಲ್ಲಿದೆ ಸುಖಾಂತ್ಯ ಕಾಣಬೇಕಿದೆ ಎಂದು ಆಶಯ ವ್ಯಕ್ತಪಡಿಸಿದೆ.