ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ಮೇಳೆ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಸಿ. ನಾರಾಯಣ ಗೌಡ ಅವರ ವಿರುದ್ಧ ಕೆ.ಆರ್.ಪೇಟೆ ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಮತ್ತು ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಚಿವ ಕೆ.ಸಿ.ನಾರಾಯಣ ಗೌಡ ಅವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ, ಪ್ರಕರಣವನ್ನು ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಲಾಗುತ್ತದೆ. ಮಾಹಿತಿದಾರ ಮ್ಯಾಜಿಸ್ಟ್ರೇಟ್ ಕೊರ್ಟ್‌ಗೆ ಹಾಜರಾಗಿ ತನಿಖೆಗೆ ಅನುಮತಿ ನೀಡುವಂತೆ ಕೋರುವ ಹಂತದಿಂದ ಪ್ರಕರಣವನ್ನು ಹೊಸದಾಗಿ ಕಾನೂನು ಪ್ರಕಾರ ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಏನಿದು ಪ್ರಕರಣ?
ಕಳೆದ ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭ ಮತದಾರರಿಗೆ ಪ್ರಭಾವ ಬೀರಿದ್ದಾರೆ ಹಾಗೂ ಚುನಾವಣೆ ನೀತಿ ಸಂಹಿತೆ ಉಲ್ಲಂ ಸಿದ್ದಾರೆ ಎಂದು ಆರೋಪಿಸಿ ಸಂಚಾರ ತಪಾಸಣ ದಳದ ಅಧಿಕಾರಿಯವರು ಕೆ.ಆರ್. ಪೇಟೆ ಟೌನ್ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.