Advertisement

PSI ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಹೈಕೋರ್ಟ್; ಮರುಪರೀಕ್ಷೆಗೆ ಆದೇಶ

01:51 PM Nov 10, 2023 | sudhir |

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸಿರುವ ಹೈಕೋಟ್೯,‌ ಸ್ವತಂತ್ರ ಸಂಸ್ಥೆ ಮೂಲಕ ಸರ್ಕಾರ ಹೊಸದಾಗಿ ಪರೀಕ್ಷೆ ನಡೆಸಬಹುದು ಎಂದು ಆದೇಶಿಸಿದೆ.

Advertisement

ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ. ಚಂದನ್ ಸೇರಿದಂತೆ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಮಂದಿ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪುನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾ.ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಆದೇಶ ಪ್ರಕಟಿಸಿದೆ.

ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.27ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ. ವಿಭಾಗೀಯ ನ್ಯಾಯಪೀಠವು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿಸಿತ್ತು.

ಇದನ್ನೂ ಓದಿ: P.B.Acharya; ಈಶಾನ್ಯ ರಾಜ್ಯಗಳ ಮಾಜಿ ಗವರ್ನರ್, ಉಡುಪಿಯ ಪಿ. ಬಿ. ಆಚಾರ್ಯ ನಿಧನ

Advertisement

Udayavani is now on Telegram. Click here to join our channel and stay updated with the latest news.

Next