Advertisement

Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್‌

10:39 PM Dec 04, 2024 | Team Udayavani |

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ಕಿರುಕುಳ ನೀಡಿದ್ದಕ್ಕೆ ಮನನೊಂದು ವಕೀಲೆ ಎಸ್‌. ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್‌, ಪ್ರಕರಣದ ತನಿಖೆಗೆ ಮೂವರು ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ “ವಿಶೇಷ ತನಿಖಾ ತಂಡ’ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, 3 ತಿಂಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಗಡುವು ವಿಧಿಸಿದೆ.

Advertisement

ಹೈಕೋರ್ಟ್‌ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ ಐಪಿಎಸ್‌ ಅಧಿಕಾರಿಗಳಾದ ಸಿಬಿಐ ಎಸ್ಪಿ ವಿನಾಯಕ್‌ ವರ್ಮಾ, ಗೃಹ ರಕ್ಷಕ ದಳದ ಎಸ್ಪಿ ಹಾಕೆ ಅಕ್ಷಯ್‌ ಮಂಚಿಂದ್ರ, ಆಂತರಿಕ ಭದ್ರತಾ ವಿಭಾಗದ ಎಸ್ಪಿ ನಿಶಾ ಜೇಮ್ಸ್‌ ಇದ್ದು, ವಿನಾಯಕ್‌ ವರ್ಮಾ ತಂಡದ ಮುಖ್ಯಸ್ಥರಾಗಿದ್ದಾರೆ.

ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಮಧ್ಯಾಂತರ ಅರ್ಜಿ ಹಾಗೂ ತಮ್ಮ ವಿರುದ್ಧ ಬನಶಂಕರಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ವಕೀಲೆ ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಡಿವೈಎಸ್ಪಿ ಕನಕಲಕ್ಷ್ಮೀ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅಲ್ಲದೆ, ಭೋವಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿನ ಮಧ್ಯಾಂತರ ಆದೇಶ ಮುಂದುವರಿಯಲಿದೆ. ಅವುಗಳ ವಿಚಾರಣೆ ಯನ್ನು ಡಿ.19ಕ್ಕೆ ನಡೆಸಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next