Advertisement

ಮಲೆನಾಡು ಭಾಗಗಳಲ್ಲಿ ಮಂಗನ ಕಾಯಿಲೆ : ವರದಿ ಕೇಳಿದ ಹೈಕೋರ್ಟ್‌

01:52 PM Aug 12, 2020 | sudhir |

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟಲು 2020ರಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ. ಈ ವಿಷಯದ ಕುರಿತು ಶಿವಮೊಗ್ಗದ ವಕೀಲರಾದ ಕೆ.ಪಿ. ಶ್ರೀಪಾಲ್‌ ಹಾಗೂ ಎನ್‌.ಜಿ. ರಮೇಶಪ್ಪ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾ| ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.

Advertisement

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಡಿ.ಕಾಶೀನಾಥ್‌ ವಾದ ಮಂಡಿಸಿ, 2020ರ ಜನವರಿಯಿಂದ ಮೇ ವರೆಗೆ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉ. ಕ. ಜಿಲ್ಲೆಗಳಲ್ಲಿ 15ಕ್ಕೂ ಹೆಚ್ಚು ಜನ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ಅರ್ಜಿ ಸಂಬಂಧ ಸರಕಾರ ಸಲ್ಲಿಸಿರುವ ಆಕ್ಷೇಪಣ ಪತ್ರದಲ್ಲಿ 2019ರಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಮತ್ತು ಬಾಧಿತರ ಚಿಕಿತ್ಸೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ಆದರೆ, 2020ರಲ್ಲಿ ಉಲ್ಬಣವಾಗಿರುವ ಕಾಯಿಲೆ ನಿಯಂತ್ರಣಕ್ಕೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

Advertisement

Udayavani is now on Telegram. Click here to join our channel and stay updated with the latest news.

Next