Advertisement
ಮನುಷ್ಯರಿಂದ ಮ್ಯಾನ್‌ಹೋಲ್ ಸ್ವತ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಎಐಸಿಸಿಟಿಯುನ ಕರ್ನಾಟಕ ಘಟಕ ಹಾಗೂ ಇದೇ ವಿಚಾರವಾಗಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
Related Articles
Advertisement
ಅಲ್ಲದೇ, ರಾಮನಗರದಲ್ಲಿ ಶೌಚಗುಂಡಿಯಲ್ಲಿ ಬಿದ್ದು ಮೃತಪಟ್ಟ ಕಾರ್ಮಿಕರ ಮಕ್ಕಳಿಗೆ 1 ಸಾವಿರ ರೂ. ಸ್ಕಾಲರ್‌ಶಿಪ್ ನೀಡಲಾಗಿದೆ ಎಂದು ಸರ್ಕಾರ ಹೇಳಿರುವುದು “ಕಣ್ಣೊರೆಸುವ ತಂತ್ರ’ವಾಗಿದೆ. ಇನ್ನೊಂದು ಕಡೆ 10 ಸಾವಿರ ಸ್ಕಾಲರ್‌ಶಿಪ್ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಸ್ಕಾಲರ್‌ಶಿಪ್ ತಿಂಗಳಿಗೆ ಅಥವಾ ವರ್ಷಕ್ಕೆ ಒಂದು ಬಾರಿ ಕೊಡಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಮನುಷ್ಯರಿಂದ ಮ್ಯಾನ್‌ಹೋಲ್ ಸ್ವತ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ಅನ್ವಯ ಸ್ಕಾಲರ್‌ಶಿಪ್ ನೀಡುವುದು ಸರ್ಕಾರದ ಬಾಧ್ಯತೆಯಾಗಿದೆ. ಆದರೆ, ಇದರಲ್ಲಿ ತಾರತಮ್ಯ ಇರಕೂಡದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸ್ಕಾಲರ್‌ಶಿಪ್ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ 30 ದಿನಗಳಲ್ಲಿ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು.
ರಾಮನಗರದಲ್ಲಿ ಶೌಚಗುಂಡಿಗೆ ಇಳಿದು ಮೃತಪಟ್ಟ ಮೂವರು ಹಾಗೂ ಕಲಬುರಗಿಯ ಕೈಲಾಶ್ ನಗರದಲ್ಲಿ ಶೌಚಗುಂಡಿ ಸcತ್ಛಗೊಳಿಸುವ ವೇಳೆ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಸ್ಥರಿಗೆ 30 ದಿನಗಳಲ್ಲಿ ಪರ್ಯಾಯ ಉದ್ಯೋಗ ನೀಡಬೇಕು. ಮ್ಯಾನುಯೆಲ್ ಸ್ಕ್ಯಾವೆಂಜರ್ಸ್‌ಗಳಿಗೆ ನೀಡಲಾಗುವ ಉಪಕರಣಗಳ ಸಮಗ್ರ ಪಟ್ಟಿಯಲ್ಲಿ 30 ದಿನಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.