Advertisement

ಮ್ಯಾನುಯೆಲ್‌ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಎರಡು ತಿಂಗಳಲ್ಲಿ ಮುಗಿಸಿ : ಹೈಕೋರ್ಟ್‌ ಆದೇಶ

07:01 PM Oct 04, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ “ಮ್ಯಾನುಯೆಲ್‌ ಸ್ಕ್ಯಾವೆಂಜರ್ಸ್‌’ಗಳ (ಶೌಚಗುಂಡಿ ಸ್ವತ್ಛಗೊಳಿಸುವ ಕಾರ್ಮಿಕರ) ಸಮಗ್ರ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಮನುಷ್ಯರಿಂದ ಮ್ಯಾನ್‌ಹೋಲ್‌ ಸ್ವತ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಎಐಸಿಸಿಟಿಯುನ ಕರ್ನಾಟಕ ಘಟಕ ಹಾಗೂ ಇದೇ ವಿಚಾರವಾಗಿ ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಈ ವೇಳೆ, ಮ್ಯಾನುಯೆಲ್‌ ಸ್ಕ್ಯಾವೆಂಜರ್ಸ್‌ಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ “ತಮಟೆ’ ಎಂಬ ಸ್ವಯಂಸೇವಾ ಸಂಸ್ಥೆ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದ ಮಂಡಿಸಿ, ಮ್ಯಾನುಯೆಲ್‌ ಸ್ಕ್ಯಾವೆಂಜರ್ಸ್‌ಗಳ ಸಮೀಕ್ಷೆ ನಡೆಸಲು ನ್ಯಾಯಾಲಯ ಹಿಂದೆಯೇ ನಿರ್ದೇಶನ ನೀಡಿದೆ ಆದರೆ, ಈವರೆಗೆ ಅದು ಆಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಮ್ಯಾನುಯೆಲ್‌ ಸ್ಕ್ಯಾವೆಂಜಿಂಗ್‌ಗಾಗಿ ಉದ್ಯೋಗ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ-2020ರ ಪ್ರಕಾರ ಮ್ಯಾನುಯೆಲ್‌ ಸ್ಕ್ಯಾವೆಂಜರ್ಸ್‌ಗಳ ಸಮೀಕ್ಷೆ ನಡೆಸಲು ಆಗಸ್ಟ್‌ ತಿಂಗಳಲ್ಲಿ ನೋಡಲ್‌ ಅಧಿಕಾರಿ ನೇಮಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಹಾಗಾಗಿ, ಎರಡು ತಿಂಗಳಲ್ಲಿ ಮ್ಯಾನುಯೆಲ್‌ ಸ್ಕ್ಯಾವೆಂಜರ್ಸ್‌ಗಳ ಸಮೀಕ್ಷೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಇದನ್ನೂ ಓದಿ :ಅಂಚೆ ಕಾರ್ಡ್‌ ಮಹಾ ಅಭಿಯಾನ : ಪ್ರಧಾನಿಗೆ ಪತ್ರ ಬರೆದ ನಳಿನ್‌ಕುಮಾರ್‌ ಕಟೀಲ್‌

Advertisement

ಅಲ್ಲದೇ, ರಾಮನಗರದಲ್ಲಿ ಶೌಚಗುಂಡಿಯಲ್ಲಿ ಬಿದ್ದು ಮೃತಪಟ್ಟ ಕಾರ್ಮಿಕರ ಮಕ್ಕಳಿಗೆ 1 ಸಾವಿರ ರೂ. ಸ್ಕಾಲರ್‌ಶಿಪ್‌ ನೀಡಲಾಗಿದೆ ಎಂದು ಸರ್ಕಾರ ಹೇಳಿರುವುದು “ಕಣ್ಣೊರೆಸುವ ತಂತ್ರ’ವಾಗಿದೆ. ಇನ್ನೊಂದು ಕಡೆ 10 ಸಾವಿರ ಸ್ಕಾಲರ್‌ಶಿಪ್‌ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಸ್ಕಾಲರ್‌ಶಿಪ್‌ ತಿಂಗಳಿಗೆ ಅಥವಾ ವರ್ಷಕ್ಕೆ ಒಂದು ಬಾರಿ ಕೊಡಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಮನುಷ್ಯರಿಂದ ಮ್ಯಾನ್‌ಹೋಲ್‌ ಸ್ವತ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ಅನ್ವಯ ಸ್ಕಾಲರ್‌ಶಿಪ್‌ ನೀಡುವುದು ಸರ್ಕಾರದ ಬಾಧ್ಯತೆಯಾಗಿದೆ. ಆದರೆ, ಇದರಲ್ಲಿ ತಾರತಮ್ಯ ಇರಕೂಡದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸ್ಕಾಲರ್‌ಶಿಪ್‌ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ 30 ದಿನಗಳಲ್ಲಿ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು.

ರಾಮನಗರದಲ್ಲಿ ಶೌಚಗುಂಡಿಗೆ ಇಳಿದು ಮೃತಪಟ್ಟ ಮೂವರು ಹಾಗೂ ಕಲಬುರಗಿಯ ಕೈಲಾಶ್‌ ನಗರದಲ್ಲಿ ಶೌಚಗುಂಡಿ ಸcತ್ಛಗೊಳಿಸುವ ವೇಳೆ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಸ್ಥರಿಗೆ 30 ದಿನಗಳಲ್ಲಿ ಪರ್ಯಾಯ ಉದ್ಯೋಗ ನೀಡಬೇಕು. ಮ್ಯಾನುಯೆಲ್‌ ಸ್ಕ್ಯಾವೆಂಜರ್ಸ್‌ಗಳಿಗೆ ನೀಡಲಾಗುವ ಉಪಕರಣಗಳ ಸಮಗ್ರ ಪಟ್ಟಿಯಲ್ಲಿ 30 ದಿನಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next