Advertisement
ವಕೀಲ ಎಸ್. ಉಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರ, ಗೃಹ ಇಲಾಖೆ, ಎಸ್‌ಐಟಿ ಸಹಿತ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏ.17ಕ್ಕೆ ಮುಂದೂಡಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶಿಸಿತು.
ಯುವತಿ ಸಿಆರ್‌ಪಿಸಿ ಸೆಕ್ಷನ್ 164ರಡಿ ನೀಡಿರುವ ಹೇಳಿಕೆಯನ್ನು ರದ್ದುಪಡಿಸುವಂತೆ ಕೋರಿ ಆಕೆಯ ತಂದೆ ಸಲ್ಲಿಸಿರುವ ಅರ್ಜಿ ಸಂಬಂಧ ಗೃಹ ಇಲಾಖೆ ಮತ್ತು ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಇದನ್ನೂ ಓದಿ :ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ : ಶಿರಡಿ ಸಾಯಿಬಾಬಾ ದೇವಸ್ಥಾನದ ಬಾಗಿಲು ಬಂದ್
Related Articles
Advertisement
ಎಸ್‌ಐಟಿ ರದ್ದು ಕೋರಿ ಅರ್ಜಿ: ನೋಟಿಸ್ಸಿ.ಡಿ. ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಎ.17ಕ್ಕೆ ಮುಂದೂಡಿತು.