ಬೆಂಗಳೂರು: ರಾಜ್ಯೋತ್ಸವ ಹಾಗೂ ದೀಪಾವಳಿ ಕೊಡುಗೆ ಎಂಬಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ.
ಮೂಲ ವೇತನ ಶೇ.21.50 ರಿಂದ ಶೇ.24.50 ಕ್ಕೆ ಪರಿಷ್ಕರಿಸಲಾಗಿದೆ.ಜುಲೈ 1 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಇದು ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವೂ ತನ್ನ ನೌಕರರಿಗೆ ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ಆದೇಶವೂ ಹೊರಬಿದ್ದಿದೆ.
ಧನ್ಯವಾದ
ತುಟ್ಟಿಭತ್ಯೆ ಹೆಚ್ಚಳಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘವು ಹರ್ಷ ವ್ಯಕ್ತಪಡಿಸಿದೆ. ಸಂಘದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸಿದ್ದು, ಅವರಿಗೆ ಧನ್ಯವಾದಗಳು ಎಂದು ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.